Chandan shetty: ಶೀಘ್ರ ಸೂತ್ರಧಾರಿ ಟ್ರೇಲರ್ ಬಿಡುಗಡೆ

ಚಂದನ್ ಶೆಟ್ಟಿಅಭಿನಯದ ಸೂತ್ರಧಾರಿ ಚಿತ್ರದ ಡಬ್ಬಿಂಗ್​ ಕೆಲಸ ನಡೆಯುತ್ತಿದ್ದು, ಶೀಘ್ರದಲ್ಲೇ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್​​ ಮಾಡಿದೆ.

 

ಚಂದನ್ ಶೆಟ್ಟಿ ಅವರು ಸೈಲೆಂಟ್ ಆಗಿ ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇದೆ. ಇದರ ಬೆನ್ನಲ್ಲೇ ಸೂತ್ರಧಾರಿ ಚಿತ್ರತಂಡದಿಂದ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ‌. ಚಂದನ್ ಶೆಟ್ಟಿ ಈ ಚಿತ್ರದ ಸಂಗೀತ ನಿರ್ದೇಶಕರಾಗಿಯೂ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಚಿತ್ರದ ಡ್ಯಾಶ್ ಸಾಂಗ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

 

ಚಿತ್ರದಲ್ಲಿ ಚಂದನ್‌  ಶೆಟ್ಟಿ ಜೋಡಿಯಾಗಿ ಅಪೂರ್ವ ನಟಿಸಿದ್ದಾರೆ‌. ಜೊತೆಗೆ ಸಂಜನಾ ಆನಂದ್ ಸ್ಪೆಷಲ್ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ತಬಲನಾಣಿ ಸೇರಿದಂತೆ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ‌. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಹಾಗೂ ಮೋಹನ್ ಅವರ ನೃತ್ಯ ನಿರ್ದೇಶನವಿದೆ.

ದಕ್ಷಿಣ ಭಾರತದಲ್ಲಿ ಮೈ ಮೂವೀ ಬಜಾರ್ ಮೂಲಕ ಸಾಕಷ್ಟು ಇವೆಂಟ್​ಗಳನ್ನು ನಡೆಸುತ್ತಿರುವ ನವರಸನ್ ಅವರು ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. “ಸೂತ್ರಧಾರಿ” ಇವರ ನಿರ್ಮಾಣದ ಐದನೇ ಚಿತ್ರ. ಸದ್ಯ ಡಬ್ಬಿಂಗ್ ಹಂತದಲ್ಲಿರೋ ಸೂತ್ರಧಾರಿ ಸಿನಿಮಾ ಸದ್ಯದಲ್ಲೇ ಟ್ರೇಲರ್ ಬಿಡುಗಡೆ ಮಾಡಿ ನಂತರ ಸಿನಿಮಾ ರಿಲೀಸ್ ಮಾಡುವ ಪ್ಲಾನ್​ನಲ್ಲಿದೆ.

ಚಂದನ್​ ಶೆಟ್ಟಿ ಅಭಿನಯದ ಮತ್ತೊಂದು ಚಿತ್ರ ‘ಎಲ್ಲರ ಕಾಲೆಳೆಯತ್ತೆ ಕಾಲ’ ಬಹುತೇಕ ಶೂಟಿಂಗ್ ಪೂರ್ಣಗೊಳಿಸಿದ್ದು, ಬಿಡುಗಡೆ ಹೊಸ್ತಿಲಲ್ಲಿದೆ. ಪ್ರಚಾರದ ಭಾಗವಾಗಿ ಇತ್ತೀಚೆಗಷ್ಟೇ ಈ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ಟುನ್ ಟುನ್ ಎಂದು ಶುರುವಾಗುವ ಈ ಹಾಡಿನಲ್ಲಿ ಸ್ಯಾಂಡಲ್​ವುಡ್​​ ತುಪ್ಪದ ಬೆಡಗಿ ಖ್ಯಾತಿಯ ರಾಗಿಣಿ ದ್ವಿವೇದಿ ಅವರು ಚಂದನ್​ ಶೆಟ್ಟಿ ಜೊತೆ ಹೆಜ್ಜೆ ಹಾಕಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!