ಜೀ಼ ಕನ್ನಡ ಜೀ಼ ಎಂಟರ್ಪ್ರೈಸಸ್ ಲಿಮಿಟೆಡ್(ಜೀ಼ಲ್) ಕನ್ನಡದ ಸಾಮಾನ್ಯ ಮನರಂಜನಾ ಚಾನೆಲ್ ಆಗಿದೆ. ಮೇ 2006ರಲ್ಲಿ ಪ್ರಾರಂಭವಾದ ಜೀ಼ ಕನ್ನಡ ಜನಪ್ರಿಯ ಮನರಂಜನೆಯ ಆದ್ಯತೆಯಾಗಿದ್ದು ವಿಶ್ವದಾದ್ಯಂತ ಕನ್ನಡ ವೀಕ್ಷಕರನ್ನು ರಂಜಿಸುವ ಅಸಂಖ್ಯ ಕಾರ್ಯಕ್ರಮಗಳನ್ನು ನೀಡುತ್ತಿದೆ. ಚಲನಚಿತ್ರಗಳು, ಧಾರಾವಾಹಿಗಳು ಗೇಮ್ಶೋಗಳು, ಟಾಕ್ ಶೋಗಳು ಮತ್ತು ಪ್ರಚಲಿತ ವಿದ್ಯಮಾನಗಳ ಕಾರ್ಯಕ್ರಮಗಳಿಂದ ಈ ಚಾನೆಲ್ ಬಹು ಪ್ರಕಾರಗಳ ಕೊಡುಗೆಗಳನ್ನು ನೀಡುತ್ತಿದೆ ಮತ್ತು ಮನರಂಜನೆಯ ಪ್ರಮುಖ ತಾಣವಾಗಿ ಅಪಾರ ಮೆಚ್ಚುಗೆ ಪಡೆದಿದೆ. ಜೀ಼ ಕನ್ನಡ ಹಲವು ಬ್ಲಾಕ್ಬಸ್ಟರ್ ಕಾರ್ಯಕ್ರಮಗಳಾದ ವೀಕೆಂಡ್ ವಿಥ್ ರಮೇಶ್, ಸ ರೆ ಗ ಮ ಪ, ಮತ್ತು ಡ್ರಾಮಾ ಜೂನಿಯರ್ಸ್ ಮುಂತಾದವುಗಳನ್ನು ಸೃಷ್ಟಿಸಿದ್ದು ಎಲ್ಲ ವಯೋಮಾನದ ವೀಕ್ಷಕರಿಗೂ ಇಷ್ಟವಾಗುತ್ತವೆ. ಕಂಟೆಂಟ್ ಮತ್ತು ಕಾರ್ಯಕ್ರಮದ ಆಯ್ಕೆಯ ಸಮತೋಲಿತ ಮಿಶ್ರಣವಾದ ಜೀ಼ ಕನ್ನಡ ಕರ್ನಾಟಕದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಜಿಇಸಿಗಳಲ್ಲಿ ಒಂದಾಗಿದೆ. ಜೀ಼ ಕನ್ನಡ ಎಲ್ಲ ಕೇಬಲ್ ಮತ್ತು ಡಿಜಿಟಲ್ ಪ್ಲಾಟ್ಫಾರಂಗಳಲ್ಲಿ ಉತ್ತಮ ಸಂಪರ್ಕ ಹೊಂದಿದೆ. ಈ ಚಾನೆಲ್ ಜೀ಼ಲ್ ಡಿಜಿಟಲ್ ಮತ್ತು ಮೊಬೈಲ್ ಮನರಂಜನೆಯ ಪ್ಲಾಟ್ಫಾರಂ ಜೀ಼5ನಲ್ಲಿ ಕೂಡಾ ಲಭ್ಯವಿದ್ದು ನೀವು ನಿಮ್ಮ ಅಚ್ಚುಮೆಚ್ಚಿನ ಜೀ಼ ಕನ್ನಡ ಶೋಗಳನ್ನು ತಪ್ಪಿಸಿಕೊಳ್ಳದಂತೆ ದೃಢಪಡಿಸುತ್ತದೆ. ಜೀ಼ ಪ್ರೈಮ್ ಪ್ಯಾಕ್ ಆಯ್ಕೆ ಮಾಡಿಕೊಳ್ಳಿ, ಅದರಲ್ಲಿ ಜೀ಼ ಕನ್ನಡ ಮತ್ತು ಜೀ಼ ಪಿಚ್ಚರ್ ಕೇವಲ ೧೯ ರೂ.ಗಳಲ್ಲಿ ನಿಮ್ಮ ಇಡೀ ಕುಟುಂಬದ ದೈನಂದಿನ ಮನರಂಜನೆಯ ಅಗತ್ಯಗಳನ್ನು ಪೂರೈಸುತ್ತದೆ. ಮತ್ತಷ್ಟು ವಿವರಗಳಿಗೆ ದಯವಿಟ್ಟು ನಿಮ್ಮ ಡಿಟಿಎಚ್ ಅಥವಾ ಕೇಬಲ್ ಆಪರೇಟರ್ ಸಂಪರ್ಕಿಸಿ.
ಜೀ಼ ಕನ್ನಡದಲ್ಲಿ ಮ್ಯೂಸಿಕ್ ಅನ್ ಲಾಕ್ ಮೂಲಕ ಮತ್ತೆ ಸರಿಗಮಪ ಮರುಚಾಲನೆಗೊಂಡಿದೆ. ರಾಷ್ಟ್ರಾದ್ಯಂತ ಲಾಕ್ ಡೌನ್ ಕಾರಣದಿಂದ 3 ತಿಂಗಳು ಸ್ಥಗಿತಗೊಂಡಿದ್ದ ಈ ಸಂಗೀತ ಕಾರ್ಯಕ್ರಮವು ಮತ್ತೆ ಪ್ರಾರಂಭವಾಗುತ್ತಿರುವುದು ಎಲ್ಲ ವೀಕ್ಷಕರ ಮೊಗದಲ್ಲಿ ಸಂತೋಷ ತಂದಿದೆ.
ವೇದಿಕೆಯ ಮಹಾಗುರುಗಳಾದ ನಾದಬ್ರಹ್ಮ ಡಾ.ಹಂಸಲೇಖ ಅವರ ಅಮೃತ ಹಸ್ತದಿಂದ ಸರಿಗಮಪದ ರಾಗದ ಬೀಗ ತೆಗೆಯುವುದರ ಮೂಲಕ ಕಾರ್ಯಕ್ರಮಕ್ಕೆ ಮರುಚಾಲನೆ ನೀಡಿದರು. ಅವರ ಜೊತೆಯಲ್ಲಿ ಗಾಯಕರಾದ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಹಾಗೂ ನಿರೂಪಕಿ ಅನುಶ್ರೀ ಉಪಸ್ಥಿತರಿದ್ದರು.
ಕನ್ನಡ ಕಿರುತೆರೆಯ ಮಹತ್ತರವಾದ ಸಂಗೀತ ಕಾರ್ಯಕ್ರಮ ಸರಿಗಮಪ ಯಶಸ್ವಿಯಾಗಿ 16 ಆವೃತ್ತಿಗಳನ್ನು ಪೂರೈಸಿ 17ನೇ ಆವೃತ್ತಿ ನಡೆಯುತ್ತಿತ್ತು. ಲಾಕ್ ಡೌನ್ ಈ ಜನಪ್ರಿಯ ಕಾರ್ಯಕ್ರಮದ ಪ್ರಸಾರಕ್ಕೆ ಅಡ್ಡಿಯಾಗಿತ್ತು.
ಕನ್ನಡ ಚಲನಚಿತ್ರ ಸಂಗೀತ ಕ್ಷೇತ್ರದ ಮಹಾನ್ ಸಾಧಕರಾದ ನಾದಬ್ರಹ್ಮ ಡಾ.ಹಂಸಲೇಖ, ಖ್ಯಾತ ಗಾಯಕರಾದ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ ಮತ್ತು ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ತೀರ್ಪುಗಾರರಾಗಿದ್ದು ಗಾಯನ ಪ್ರತಿಭೆಗಳಿಗೆ ಉತ್ತೇಜನ, ಪ್ರೋತ್ಸಾಹ ನೀಡುವುದಲ್ಲದೆ ಅವರಲ್ಲಿ ಪ್ರತಿಭೆ ವಿಕಾಸಗೊಳ್ಳಲು ನೆರವಾಗುತ್ತಾರೆ.
ಯಶಸ್ವಿಯಾಗಿ ಕಾರ್ಯಕ್ರಮ ನಿರೂಪಿಸುತ್ತಿರುವ ಖ್ಯಾತ ನಿರೂಪಕಿ ಅನುಶ್ರೀ ತಮ್ಮ ಅರಳು ಹುರಿದ ಮಾತುಗಳಲ್ಲಿ ಸ್ಪರ್ಧಿಗಳನ್ನು ಹುರಿದುಂಬಿಸುತ್ತಾರೆ.
ಸರಿಗಮಪ ಲಾಕ್ ಡೌನ್ ನಿರ್ಬಂಧದ ನಂತರ 17 ಸ್ಪರ್ಧಿಗಳ ಭಾಗವಹಿಸುವಿಕೆಯೊಂದಿಗೆ ಮತ್ತೆ ಪ್ರಾರಂಭವಾಗುತ್ತಿರುವುದು ಈ ಕಾರ್ಯಕ್ರಮದ ಅಭಿಮಾನಿಗಳಿಗೆ ಅಪರೂಪದ ಸಂತಸ ತಂದಿದೆ. ಜೀ಼ ಕನ್ನಡ ಎಂದಿನಂತೆ ಸಂಗೀತ, ಸಂತೋಷ, ಮನರಂಜನೆಯ ಮಹಾಪೂರವನ್ನು ಹರಿಸುವ ಮೂಲಕ ಕಿರುತೆರೆ ವೀಕ್ಷಕರ ಉತ್ಸಾಹ ಹೆಚ್ಚಿಸಲಿದೆ.
ಭಾನುವಾರ ಸಂಜೆ 7.30ಕ್ಕೆ ಪ್ರಸಾರವಾಗಲಿರುವ ಈ ಕಾರ್ಯಕ್ರಮ ವೀಕ್ಷಕರನ್ನು ಜೀ಼ ಕನ್ನಡಕ್ಕೆ ಅಂಟಿಕೊಳ್ಳುವಂತೆ ಮಾಡುವುದರಲ್ಲಿ ಸಂಶಯವಿಲ್ಲ.
ಈ ಕುರಿತು ಜೀ಼ ಕನ್ನಡ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು, “ಜೀ಼ ಕನ್ನಡ ವೀಕ್ಷಕರ ಮನಸ್ಸನ್ನು ಅರಿತು ಅದಕ್ಕೆ ತಕ್ಕಂತೆ ಕಾರ್ಯಕ್ರಮಗಳನ್ನು ರೂಪಿಸುತ್ತದೆ. ಸರಿಗಮಪ ಲಾಕ್ ಡೌನ್ ಸಮಸ್ಯೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದರೂ ಅದರ ಜನಪ್ರಿಯತೆ ಕುಗ್ಗಿಲ್ಲ. ಜನರು ಮನೆಯಲ್ಲಿಯೇ ಇದ್ದು ಆರೋಗ್ಯಕರವಾಗಿರಬೇಕಾದ ಈ ಸಂದರ್ಭದಲ್ಲಿ ಅವರ ಅಚ್ಚುಮೆಚ್ಚಿನ ಕಾರ್ಯಕ್ರಮ ನೀಡುವುದು ನಮ್ಮ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಸರಿಗಮಪ ಮತ್ತೆ ಪ್ರಾರಂಭಿಸಿದ್ದೇವೆ. ಎಂದಿನಂತೆ ವೀಕ್ಷಕರು ಈ ಕಾರ್ಯಕ್ರಮವನ್ನು ಸ್ವಾಗತಿಸುತ್ತಾರೆ ಎಂಬ ವಿಶ್ವಾಸ ನಮ್ಮದು” ಎಂದರು.
Pingback: Casino