ರೋರಿಂಗ್ ಸ್ಟಾರ್ ಶ್ರೀಮುರಳಿ ಹೊಸ ಚಿತ್ರಕ್ಕೆ ‘ತತ್ಸಮ ತದ್ಭವ’ ಚಿತ್ರದ ನಿರ್ದೇಶಕ ವಿಶಾಲ್ ಅತ್ರೇಯ ಅವರು ನಿರ್ದೇಶನ ಮಾಡಲಿದ್ದಾರೆ.
ಶ್ರೀಮುರಳಿ ಹೊಸ ಸಿನಿಮಾಗಾಗಿ ತೆಲುಗಿನ ಜನಪ್ರಿಯ ಚಲನಚಿತ್ರ ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ಯೊಂದಿಗೆ ಕೈಜೋಡಿಸುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ವಿಶಾಲ್ ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಮೇಘನಾ ರಾಜ್ ಸರ್ಜಾ ನಟನೆಯ ಸಸ್ಪೆನ್ಸ್ ಥ್ರಿಲ್ಲರ್ ‘ತತ್ಸಮ ತದ್ಭವ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದ ವಿಶಾಲ್ ತೀಕ್ಷ್ಣ ಮತ್ತು ಸಂಕೀರ್ಣವಾದ ಕಥೆ ಹೇಳುವಿಕೆಗಾಗಿ ಪ್ರಶಂಸೆ ಗಳಿಸಿದರು. ಈಗ ಶ್ರೀಮುರಳಿಯಂತಹ ದೊಡ್ಡ ತಾರೆಯ ಚಿತ್ರ ನಿರ್ದೇಶಿಸುವ ಅವಕಾಶ ಪಡೆಯುತ್ತಿದ್ದಾರೆ. ಚಿತ್ರ ಪೀಪಲ್ ಮೀಡಿಯಾ ಫ್ಯಾಕ್ಟರಿಯ 47ನೇ ಚಿತ್ರವಾಗಿದ್ದು, ಇದನ್ನು ಬಹು ಭಾಷೆಗಳಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ನಿರ್ದೇಶಕರು ಮತ್ತು ಕಥಾಹಂದರದ ಬಗ್ಗೆ ಅಧಿಕೃತ ಪ್ರಕಟಣೆ ಹೊರಬರಬೇಕಿದೆ.
ಶ್ರೀಮುರಳಿ ಹಾಲೇಶ್ ಕೋಗುಂಡಿ ನಿರ್ದೇಶನದ ಪರಾಕ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಾರ್ಚ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ನಂತರ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.
Be the first to comment