ರೋರಿಂಗ್ ಸ್ಟಾರ್ ಶ್ರೀಮುರಳಿ ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಜತೆಗೆ ಕೈ ಜೋಡಿಸಿದ್ದಾರೆ. ಈ ಸಂಸ್ಥೆ ನಿರ್ಮಾಣ ಮಾಡಲಿರುವ ಸಿನಿಮಾದಲ್ಲಿ ನಾಯಕನಾಗಿ ಶ್ರೀಮುರಳಿ ನಟಿಸಲಿದ್ದಾರೆ.
ಬಘೀರ ಸಿನಿಮಾ ಬಳಿಕ ಶ್ರೀಮುರಳಿ ಅವರ ಮುಂದಿನ ಸಿನಿಮಾ ಕುರಿತು ಇಲ್ಲಿಯವರೆಗೆ ಉತ್ತರ ಸಿಕ್ಕಿರಲಿಲ್ಲ. ಶ್ರೀಮುರಳಿ ಬರ್ತಡೇ ಪ್ರಯುಕ್ತ ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ಸಿಕ್ಕಿದೆ. ಬಘೀರ ಬಳಿಕ ಈಗ ಶ್ರೀಮುರಳಿ ಇನ್ನೊಂದು ಮಹೋನ್ನತ ಸಿನಿಮಾದ ಭಾಗವಾಗುತ್ತಿದ್ದಾರೆ. ಅಭಿಮಾನಿಗಳು ಮತ್ತು ಸಿನಿಮಾ ಪ್ರೇಮಿಗಳಲ್ಲೂ ಇದು ಕುತೂಹಲ ಮೂಡಿಸಿದೆ.
ಪೀಪಲ್ ಮೀಡಿಯಾ ಫ್ಯಾಕ್ಟರಿ, ಮುಂದಿನ ದಿನಗಳಲ್ಲಿ ನಿರ್ದೇಶಕರು, ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ನೀಡಲಿದೆ. ಚಿತ್ರದ ಅಧಿಕೃತ ಪೋಸ್ಟರ್ ಬಿಡುಗಡೆ ಆಗಿದೆ.
ಪೀಪಲ್ ಮೀಡಿಯಾ ಫ್ಯಾಕ್ಟರಿ ಈ ಸಿನಿಮಾದ ಮೂಲಕ ಕನ್ನಡ ಚಿತ್ರೋದ್ಯಮ ಪ್ರವೇಶಿಸುತ್ತಿದೆ. ಈಗಾಗಲೇ ಕನ್ನಡದ ನಿರ್ಮಾಣ ಸಂಸ್ಥೆಗಳು ಪರಭಾಷೆ ಸಿನಿಮಾ ನಿರ್ಮಾಣದಲ್ಲಿ ತೊಡಗಿವೆ. ಈಗ ಬೇರೆ ಭಾಷೆ ಸಂಸ್ಥೆ ಕನ್ನಡಕ್ಕೆ ಚಿತ್ರ ನಿರ್ಮಾಣಕ್ಕೆ ಆಗಮಿಸಿದೆ.
Be the first to comment