2017ನೇ ಸಾಲಿನ ಕರ್ನಾಟಕ ಚಲನಚಿತ್ರ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ದಿನಾಂಕ ಪ್ರಕಟಗೊಂಡಿದೆ.
ಡಾ.ರಾಜ್ ಕುಮಾರ್ ಹುಟ್ಟು ಹಬ್ಬದ ದಿನವಾದ ಏಪ್ರಿಲ್ 24 ರಂದು ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು 2017ನೇ ಸಾಲಿನ ಚಲನಚಿತ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲಿದ್ದಾರೆ.
ಶುದ್ಧಿ, ಮಾರ್ಚ್ 22, ಪಡ್ಡಾಯಿ (ತುಳು) ಚಿತ್ರಗಳು ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಅತ್ಯುತ್ತಮ ಚಿತ್ರಗಳಾಗಿ ಆಯ್ಕೆ ಆಗಿವೆ.
ವಿಶೇಷ ಸಾಮಾಜಿಕ ಕಾಳಜಿಯ ಚಿತ್ರವಾಗಿ ಹೆಬ್ಬಟ್ ರಾಮಕ್ಕ, ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರವಾಗಿ ರಾಜಕುಮಾರ, ಅತ್ಯುತ್ತಮ ಮಕ್ಕಳ ಚಿತ್ರವಾಗಿ ಎಳೆಯರು ನಾವು ಗೆಳೆಯರು, ಅತ್ಯುತ್ತಮ ನಟಿಯಾಗಿ ತಾರಾ ಅನುರಾಧ, ಅತ್ಯುತ್ತಮ ಪೋಷಕ ನಟಿ ಆಗಿ ರೇಖಾ, ಅತ್ಯುತ್ತಮ ಸಂಗೀತ ನಿರ್ದೇಶನ ಪ್ರಶಸ್ತಿಗೆ ವಿ.ಹರಿಕೃಷ್ಣ ಆಯ್ಕೆಯಾಗಿದ್ದಾರೆ.
ಇನ್ನು ಅನೇಕ ವಿಭಾಗಗಳಲ್ಲಿ ಕಲಾವಿದರು ಆಯ್ಕೆಯಾಗಿದ್ದು, ಭಾನುವಾರ ನಡೆಯಲಿರುವ ರಾಜ್ಯ ಚಲನಚಿತ್ರ ಪ್ರಶಸ್ತಿ 2017ರ ಸಮಾರಂಭದಲ್ಲಿ ಪ್ರಶಸ್ತಿ ವಿಜೇತರಿಗೆ ಬಹುಮಾನ ವಿತರಿಸಲಾಗವುದು.
__
Be the first to comment