ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಬ್ಯಾನರ್ಗೆ ಖಾಸಗಿ ಕಾಲೇಜಿನ ಕೆಲ ವಿದ್ಯಾರ್ಥಿಗಳು ಅವಮಾನ ಮಾಡಿದ ಘಟನೆ ಜೆಪಿ ನಗರದಲ್ಲಿ ಬೆಳಕಿಗೆ ಬಂದಿದೆ.
ಕೆಲ ವಿದ್ಯಾರ್ಥಿಗಳು ವಿಷ್ಣುವರ್ಧನ್ ಬ್ಯಾನರ್ ಮುಂದೆ ಅವಹೇಳನಕಾರಿ ಚಟುವಟಿಕೆ ತೋರಿಸಿ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ಕುರಿತು ವಿಷ್ಣು ಅಭಿಮಾನಿಗಳು ಜೆಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದಾರೆ.
ಅಪ್ರಾಪ್ತರಾಗಿರುವ ಕಾರಣ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ತಪ್ಪೊಪ್ಪಿಗೆ ಪತ್ರ ಬರೆಯಿಸಿಕೊಂಡು ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳ ಪೋಷಕರು ವಿಷ್ಣು ಅಭಿಮಾನಿಗಳ ಹಾಗೂ ಸಾರ್ವಜನಿಕರ ಬಳಿ ಕ್ಷಮೆಯಾಚಿಸಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ಸಾಹಸಸಿಂಹ ಡಾ. ವಿಷ್ಣುವರ್ಧನ್ ಗೌರವವನ್ನು ಕಾಪಾಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
—-





Be the first to comment