‘ಮ್ಯಾಕ್ಸ್’ ಬಿಡುಗಡೆ ಬಗ್ಗೆ ಯಾವ ಭಿನ್ನಾಭಿಪ್ರಾಯಗಳೂ ಇಲ್ಲಎಂದು ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದಾರೆ.
ನಿರ್ಮಾಪಕ ಕಲೈಪುಲಿ ಥಾನು ಮತ್ತು ನಟ ಸುದೀಪ್ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಚಿತ್ರ ಬಿಡುಗಡೆ ತಡವಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ವದಂತಿಯನ್ನು ಸುದೀಪ್ ಅವರು ನಿರಾಕರಿಸಿದ್ದಾರೆ.
ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಮ್ಮ ನಡುವೆ ಭಿನ್ನಾಭಿಪ್ರಾಯಗಳಿದ್ದರೆ, ಸಿನಿಮಾ ಪೂರ್ಣಗೊಳಿಸಲು ಸಾಧ್ಯವಾಗುತ್ತಿತ್ತೇ? ಚಿತ್ರ ನಿರ್ಮಾಣ ಸಂಸ್ಥೆ ತಮಿಳುನಾಡಿನಲ್ಲಿದ್ದು, ಅಲ್ಲಿ ಸಾಕಷ್ಟು ಸವಾಲುಗಳಿವೆ. ನಮ್ಮಿಂದಾಗಬೇಕಿದ್ದ ಎಲ್ಲಾ ಕೆಲಸವೂ ಆಗಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಎಲ್ಲೆಡೆ ಬಿಡುಗಡೆ ಮಾಡಬೇಕಿದ್ದು, ಸಮಯ ತೆಗೆದುಕೊಳ್ಳುತ್ತಿದ್ದಾರೆ. ನಾವು ಅದನ್ನು ಗೌರವಿಸಬೇಕು. ಚಿತ್ರ ಬಿಡುಗಡೆಯಾದರೆ, ಅದರ ಲಾಭ ಎಲ್ಲರಿಗೂ ಕಾಣಿಸುತ್ತದೆ ಎಂದು ತಿಳಿಸಿದ್ದಾರೆ.
ಮ್ಯಾಕ್ಸ್ ಚಿತ್ರ ಬಿಡುಗಡೆಗಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಆರಂಭದಲ್ಲಿ ಗಣೇಶ ಹಬ್ಬದಂದು ಚಿತ್ರ ಬಿಡುಗಡೆಯಾಗಲಿದೆ ಎನ್ನಲಾಗಿತ್ತು. ನಂತರ ಸೆಪ್ಟೆಂಬರ್ 27ಕ್ಕೆ ಬಿಡುಗಡೆಯಾಗಲಿದೆ ಎನ್ನಲಾಗಿತ್ತು. ಆದರೆ, ಚಿತ್ರ ತಂಡ ಇನ್ನೂ ಯಾವುದೇ ಘೋಷಣೆಗಳನ್ನು ಮಾಡಿಲ್ಲ.
‘ಮ್ಯಾಕ್ಸ್’ ಸುದೀಪ್ ನಟನೆಯ 46ನೇ ಸಿನಿಮಾವಾಗಿದ್ದು, ಚಿತ್ರದಲ್ಲಿ ಸುದೀಪ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಸಿನಿಮಾ ಪ್ಯಾನ್ ಇಂಡಿಯಾದಲ್ಲಿ ತೆರೆಕಾಣುತ್ತಿದೆ.
ಸುದೀಪ್ ಜೊತೆಗೆ ‘ಪುಷ್ಪ’ ಖ್ಯಾತಿಯ ಸುನೀಲ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ ಮುಂತಾದವರು ಇದ್ದಾರೆ. ಮ್ಯಾಕ್ಸ್ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.
ಚಿತ್ರ ಮ್ಯಾಕ್ಸ್ ಬಿಡುಗಡೆ ವಿಳಂಬವಾಗಿದ್ದು, ಕಿಚ್ಚ ಸುದೀಪ್ ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.
Be the first to comment