ಪ್ರೇಮ್ ನಿರ್ದೇಶನದ ಕೆಡಿ ಚಿತ್ರದಲ್ಲಿ ‘ಕಾಲ ಭೈರವ’ನಾಗಿ ಕಿಚ್ಚ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ.
ಧ್ರುವ ಸರ್ಜಾ ನಟಿಸಿರುವ ಕೆಡಿ ಚಿತ್ರದಲ್ಲಿ ನಟ ಕಿಚ್ಚ ಸುದೀಪ್ ನಟಿಸಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. ಇದೀಗ ಚಿತ್ರತಂಡವೇ ಅಧಿಕೃತವಾಗಿ ಈ ಸುದ್ದಿಯನ್ನು ದೃಢಪಡಿಸಿದೆ. ಚಿತ್ರದ ನಿರ್ದೇಶಕ ಜೋಗಿ ಪ್ರೇಮ್ ಈ ವಿಚಾರ ಹಂಚಿಕೊಂಡಿದ್ದಾರೆ.
ಕಾಲ ಭೈರವ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಪೋಸ್ಟರ್‌ನಲ್ಲಿ ಕಿಚ್ಚ ಸುದೀಪ್ ಅವರು ಕಾಶಿ ಹಿನ್ನೆಲೆಯಲ್ಲಿ ಹಿಂತಿರುಗಿ ನಿಂತಿದ್ದಾರೆ. ಕೈಯಲ್ಲಿ ರುದ್ರಾಕ್ಷಿ ಹಿಡಿದಿರುವುದನ್ನು ಕಾಣಬಹುದು.
‘ಕೆಲವು ಹೆಸರುಗಳು ಭಯವನ್ನು ಉಂಟುಮಾಡಿದರೆ, ಇದು ‘ಅವ್ಯವಸ್ಥೆ’ಯನ್ನು ಸೃಷ್ಟಿಸುತ್ತದೆ. ಆ ಹೆಸರೇ ಕಾಲ ಭೈರವ’ ಎಂದು ನಿರ್ದೇಶಕ ಪ್ರೇಮ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಈ ಹಿಂದೆ ‘ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ’ ಹಾಡಿನ ಕಾರಣದಿಂದಾಗಿ ಕೆಡಿ ವಿವಾದವನ್ನು ಹುಟ್ಟುಹಾಕಿತ್ತು. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ಸತ್ಯ ಹೆಗ್ಡೆ ಛಾಯಾಗ್ರಹಣವಿದೆ. ಚಿತ್ರ ಏಪ್ರಿಲ್ 30 ರಂದು ಬಿಡುಗಡೆಯಾಗಲಿದೆ.
ಚಿತ್ರದಲ್ಲಿ ರವಿಚಂದ್ರನ್, ರಮೇಶ್ ಅರವಿಂದ್, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರವಿಶಂಕರ್ ಮುಂತಾದವರು ನಟಿಸಿದ್ದಾರೆ. ನೋರಾ ಫತೇಹಿ ವಿಶೇಷ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಧ್ರುವ ಸರ್ಜಾ ಕಾಳಿದಾಸ ಪಾತ್ರದಲ್ಲಿ, ರೀಷ್ಮಾ ನಾಣಯ್ಯ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
——





Be the first to comment