ಸುದೀಪ್

ಸುದೀಪ್ ಮುಂದಿನ ಚಿತ್ರ ಶೀಘ್ರ ಪ್ರಾರಂಭ

ಕಿಚ್ಚ ಸುದೀಪ್ ನಟನೆಯ ಮುಂದಿನ ಚಿತ್ರ ಜುಲೈ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಸ್ಕ್ರಿಪ್ಟ್ ಸಿದ್ಧವಾಗಿದ್ದು, ಪ್ರಿ ಪ್ರೊಡಕ್ಷನ್ ಪ್ರಗತಿಯಲ್ಲಿದೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ. ಹೊಸ ಚಿತ್ರ ಮ್ಯಾಕ್ಸ್ ಚಿತ್ರದ ಮುಂದುವರಿದ ಭಾಗ ಇರಬಹುದು ಎಂದು ಊಹಿಸಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಸಿಗಬೇಕಿದೆ.

ನಿರ್ದೇಶಕ ವಿಜಯ್ ಕಾರ್ತಿಕೇಯನ್ ಈ ಚಿತ್ರಕ್ಕೆ ಚಾಲನೆ ನೀಡಲಿದ್ದಾರೆ. ಮ್ಯಾಕ್ಸ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದ ಅಜನೇಶ್ ಲೋಕನಾಥ್, ಛಾಯಾಗ್ರಾಹಕ ಶೇಖರ್ ಚಂದ್ರ ಈ ಚಿತ್ರದಲ್ಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಕಿಚ್ಚ ಸುದೀಪ್ ಸದ್ಯ ಬಿಲ್ಲ ರಂಗ ಭಾಷಾ ಚಿತ್ರದ ಮೊದಲ ಹಂತದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಈ ಚಿತ್ರವನ್ನು ಅನೂಪ್ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಬಾರಿಯ ಬಿಗ್​ಬಾಸ್​ ಸೀಸನ್​ 12 ನಿರೂಪಣೆ ಮಾಡಲು ಕಿಚ್ಚ ಸುದೀಪ್ ಅವರು ಗ್ರೀನ್​ ಸಿಗ್ನಲ್ ಕೊಟ್ಟಿದ್ದಾರೆ.

ಸುದೀಪ್ ಅವರ ಮುಂದಿನ ಚಿತ್ರದ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ಸಿಗುವ ನಿರೀಕ್ಷೆ ಇದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!