ಕಿಚ್ಚ ಸುದೀಪ್ ಅವರಿಗೆ ಜೀವ ಬೆದರಿಕೆ ಇರುವ ಕಾರಣದಿಂದ ಗನ್ ಮ್ಯಾನ್ ನೀಡುವಂತೆ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲು ನಿರ್ಧರಿಸಲಾಗಿದೆ.
ನಿರ್ಮಾಪಕ ಹಾಗೂ ಸುದೀಪ್ ಆಪ್ತ ಜಾಕ್ ಮಂಜು ಮನವಿ ಸಲ್ಲಿಸಲು ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿದ್ದರು. ಪೊಲೀಸ್ ಅಧಿಕಾರಿಗಳು ಮೀಟಿಂಗ್ ನಲ್ಲಿ ಇದ್ದ ಕಾರಣದಿಂದಾಗಿ ಜಾಕ್ ಮಂಜು ವಾಪಸ್ಸಾಗಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಖಾಸಗಿ ವಿಡಿಯೋ ಬೆದರಿಕೆಗೆ ಸಂಬಂಧಿಸಿದಂತೆ ಸುದ್ದಿ ಪ್ರಸಾರ ಮಾಡದಂತೆ ಕೋರ್ಟಿಗೆ ಮಂಜು ಅವರು ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಿಚ್ಚ ಸುದೀಪ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದರು.ಅಂದೇ ಸುದೀಪ್ ಅವರ ಖಾಸಗಿ ವೀಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಸಲಾಗಿತ್ತು. ಈ ಸಂಬಂಧ ಜಾಕ್ ಮಂಜು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸುದೀಪ್ ಅವರ ಹೆಸರಿನಲ್ಲಿ ಎರಡು ಪತ್ರಗಳು ಬಂದಿದ್ದು, ಮಾನಹಾನಿ ಮಾಡುವ ಕೆಲಸಕ್ಕೆ ಪತ್ರ ಬರೆದವರು ಕೈ ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು.
ಪತ್ರಗಳ ಬಗ್ಗೆ ದೂರು ದಾಖಲಾದ ದಿನ ಸುದೀಪ್ ಮಾಧ್ಯಮಗಳ, ‘ಪತ್ರದ ಹಿಂದೆ ಯಾರಿದ್ದಾರೆ ಎಂದು ನನಗೆ ಗೊತ್ತಿದೆ. ಸಿನಿಮಾ ಇಂಡಸ್ಟ್ರಿಯವರೇ ಈ ಕೃತ್ಯದ ಹಿಂದೆ ಇದ್ದಾರೆ. ಅವರಿಗೆ ಕಾನೂನು ಮೂಲಕವೇ ಉತ್ತರಿಸುತ್ತೇನೆ’ ಎಂದಿದ್ದರು.
ಈಗ ಜಾಕ್ ಮಂಜು ಅವರು ಸುದೀಪ್ ಅವರಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಗನ್ ಮ್ಯಾನ್ ನೀಡುವಂತೆ ಮನವಿ ಮಾಡಲು ಮುಂದಾಗಿದ್ದಾರೆ.
—–
Be the first to comment