ಡಾರ್ಲಿಂಗ್ ಕೃಷ್ಣ ನಟನೆಯ ಬಹುನಿರೀಕ್ಷಿತ ‘ಶುಗರ್ ಫ್ಯಾಕ್ಟರಿ’ ಚಿತ್ರ ಡಿಸೆಂಬರ್ ತಿಂಗಳಿನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.
ದೀಪಕ್ ಅರಸ್ ನಿರ್ದೇಶನದ ‘ಶುಗರ್ ಫ್ಯಾಕ್ಟರಿ’ ಚಿತ್ರದ ಶೂಟಿಂಗ್ ಈಗಾಗಲೇ ಬಹುತೇಕ ಕಂಪ್ಲೀಟ್ ಆಗಿದೆ. ಚಿತ್ರತಂಡ ಡಿಸೆಂಬರ್ ತಿಂಗಳಲ್ಲಿ ‘ಶುಗರ್ ಫ್ಯಾಕ್ಟರಿ’ ಸಿನಿಮಾವನ್ನು ರಾಜ್ಯದ್ಯಂತ ಬಿಡುಗಡೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ.
ರೋಮ್ಯಾಂಟಿಕ್ ಎಂಟರ್ಟೇನರ್ ಆಧಾರಿತ ಈ ಚಿತ್ರವನ್ನು ಬಾಲಮಣಿ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಗಿರೀಶ್ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅದ್ವಿತಿ ಶೆಟ್ಟಿ, ಸೋನಾಲ್ ಮೊಂತೆರೋ, ಹಾಗೂ ಶಿಲ್ಪ ಶೆಟ್ಟಿ ಸೇರಿದಂತೆ ಮೂವರು ನಾಯಕಿಯರು ಡಾರ್ಲಿಂಗ್ ಕೃಷ್ಣಗೆ ಜೋಡಿಯಾಗಿ ನಟಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಕಬೀರ್ ರಫಿ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿರುವುದು ವಿಶೇಷ ಆಗಿದೆ.
ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಾಹಣ ಚಿತ್ರಕ್ಕೆ ಇದೆ. ಹಾಡುಗಳಿಗೆ ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಮುಂತಾದವರ ಸಾಹಿತ್ಯ ಇದೆ. ಚೇತನ್ ಕುಮಾರ್-ಯೋಗಾನಂದ್ ಮುದ್ದಾನ್ ಅವರ ಸಂಭಾಷಣೆ ಚಿತ್ರಕ್ಕಿದೆ.
__
Be the first to comment