ತೆಲುಗು ಚಿತ್ರರಂಗದ ಖ್ಯಾತ ನಟ ಮಹೇಶ್ ಬಾಬು ಅವರ ತಂದೆ ‘ಸೂಪರ್ ಸ್ಟಾರ್’ ಕೃಷ್ಣ ಅವರು ನ.15ರ ನಸುಕಿನ 4 ಗಂಟೆ ಸುಮಾರಿಗೆ ನಿಧನರಾದರು.
ಕೃಷ್ಣ ಅವರ ಜೊತೆ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಹೇಶ್ ಬಾಬು ಅವರು ಬಾಲನಟನಾಗಿ ಅಭಿನಯಿಸಿದ್ದರು. ಸೆಪ್ಟೆಂಬರ್ 28ರಂದು ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ನಿಧನರಾಗಿದ್ದರು.
ಒಂದೂವರೆ ತಿಂಗಳ ಹಿಂದೆ ತಾಯಿ ಇಂದಿರಾ ದೇವಿ ಅವರ ನಿಧನದ ನೋವು ಮಾಸುವ ಮುನ್ನ ತಂದೆ ಕೂಡ ಕೊನೆಯುಸಿರು ಎಳೆದಿರುವುದು ಮಹೇಶ್ ಬಾಬು ಪಾಲಿನ ದುಃಖವನ್ನು ದುಪ್ಪಟ್ಟುಗೊಳಿಸಿದೆ.
ತೆಲುಗು ಚಿತ್ರರಂಗದಲ್ಲಿ ಕೃಷ್ಣ ಅವರು ಸೂಪರ್ ಸ್ಟಾರ್ ಆಗಿದ್ದರು. 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಪ್ರಾರ್ಥಿಸಿದ್ದಾರೆ.
___

Be the first to comment