ಫ್ಯಾನ್ಸ್ ಗಳಿಗೆ ಉಪೇಂದ್ರ ಸವಾಲು!

ನಟ, ನಿರ್ದೇಶಕ ಉಪೇಂದ್ರ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಫ್ಯಾನ್ಸ್‌ಗಳಿಗೆ ಛಾಲೆಂಜ್‌ ನೀಡಿದ್ದು, ಗೆದ್ದವರಿಗೆ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.18 ಪದಗಳನ್ನು ಮೀರದಂತೆ ಉತ್ತಮ ವಿಚಾರವನ್ನು ಬರೆಯುವ ಅತ್ಯುತ್ತಮವಾದ 18 ಬರವಣಿಗೆಗೆ ಸೂಕ್ತ ಬಹುಮಾನ ನೀಡಲಾಗುತ್ತದೆ ಎಂದು ಉಪೇಂದ್ರ ಹೇಳಿದ್ದಾರೆ.

ವಿಚಾರವಂತರಾಗೋಣಾ ?
ಇದೇ ಸೆಪ್ಟೆಂಬರ್ 18 ಅಭಿಮಾನಿಗಳ ದಿನದಂದು ನಿಮ್ಮನ್ನ ನಮ್ಮ ಮನೆಯಲ್ಲಿ ಬೇಟಿಯಾಗುತ್ತೇನೆ.
ಆ ದಿನ ಕೇಕ್, ಹೂಗುಚ್ಚ ಗಿಫ್ಟ್ ಎಲ್ಲಾ ಬಿಟ್ಟು …
ಒಂದು ಹಾಳೆಯಲ್ಲಿ 18 ಪದಗಳನ್ನು ಮೀರದಂತೆ ಏನಾದರೂ ಒಂದು ಉತ್ತಮ ವಿಚಾರವನ್ನು ಬರೆದು ತರುತ್ತೀರಾ ?
ಅತ್ಯುತ್ತಮವಾದ 18 ಬರವಣಿಗೆಗೆ ಸೂಕ್ತ ಬಹುಮಾನವಿರುತ್ತದೆ

— Upendra (@nimmaupendra)
ಎಂದು ಟ್ವೀಟ್ ಮಾಡಿದ್ದಾರೆ.

ಪ್ಯಾನ್‌ ಇಂಡಿಯಾ ʼಯುಐʼ ಸಿನಿಮಾದ ನಿರ್ಮಾಣದಲ್ಲಿ ಉಪೇಂದ್ರ ಅವರು ಬ್ಯುಸಿಯಾಗಿದ್ದಾರೆ. ಹಲವು ವರ್ಷಗಳ ಬಳಿಕ ‘ಯುಐ’ ಸಿನಿಮಾ ಮೂಲಕ ಉಪೇಂದ್ರ ನಿರ್ದೇಶನಕ್ಕೆ ಮರಳಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!