ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ನೀಡಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಸುಪ್ರೀಂ ಕೋರ್ಟ್ ರಾಜ್ಯಕ್ಕೆ ನೋಟೀಸ್ ಜಾರಿ ಮಾಡಿದೆ.
ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆಯಿತು. ನ್ಯಾ. ಪರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ಣೋಯಿ ಅವರ ಪೀಠ ವಿಚಾರಣೆ ನಡೆಸಿ ರಾಜ್ಯದಿಂದ ಉತ್ತರ ಕೋರಿದೆ.
ದರ್ಶನ್ ಪರ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದ ಸಂದರ್ಭ ಜೈಲಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಗಂಭೀರ ವಿಚಾರ ಎತ್ತಲಾಯಿತು. ಇದಕ್ಕೆ ಸ್ಪಂದಿಸಿದ ಸುಪ್ರೀಂ ಕೋರ್ಟ್, “5 ಸ್ಟಾರ್ ಸೌಲಭ್ಯ ಬೇಡ ಎಂದಿದ್ದೇವೆ. ಆದರೆ ಮೂಲ ಸೌಕರ್ಯವೂ ಇಲ್ಲವೇ?” ಎಂದು ಪ್ರಶ್ನಿಸಿತು.
ದರ್ಶನ್ ಅವರಿಗೆ ಮೂಲ ಸೌಲಭ್ಯ ಒದಗಿಸಲಾಗಿದೆಯೇ? ಎಷ್ಟು ಸಾಕ್ಷಿಗಳ ವಿಚಾರಣೆ ನಡೆದಿದೆ? ಇನ್ನಷ್ಟು ಸಾಕ್ಷಿಗಳ ವಿಚಾರಣೆ ಬಾಕಿಯಿದೆಯೇ? ವಿಚಾರಣೆ ಪೂರ್ಣಗೊಳ್ಳಲು ಎಷ್ಟು ಸಮಯ ಬೇಕು? ಎಂಬ ಮಾಹಿತಿಯನ್ನು ನೀಡುವಂತೆ ನ್ಯಾಯಪೀಠ ಸೂಚಿಸಿತು.
ವರದಿ ಬಂದ ಬಳಿಕ ಮುಂದಿನ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
ಪ್ರಕರಣದ ಪ್ರಗತಿ ಬಗ್ಗೆ 57ನೇ ಸಿಸಿಹೆಚ್ ನ್ಯಾಯಾಲಯದಿಂದ ವಿವರವಾದ ವರದಿ ಸಲ್ಲಿಸಲು ಒಂದು ವಾರದ ಗಡುವು ನೀಡಲಾಗಿದೆ.
_





Be the first to comment