ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಕೇಸ್ನಲ್ಲಿ ನಟ ದರ್ಶನ್ ಹಾಗೂ ಉಳಿದವರಿಗೆ ಜಾಮೀನು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ದರ್ಶನ್ ಜಾಮೀನು ಆದೇಶ ಪ್ರಶ್ನೆಸಿ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ದರ್ಶನರನ್ನು ಬಂಧಿಸಿದ್ದು ಯಾಕೆ ಎನ್ನುವ ಪ್ರಶ್ನೆಗಳನ್ನು ರಾಜ್ಯಕ್ಕೆ ಕೇಳಲಾಗಿತ್ತು. ಅದಕ್ಕೆ ರಾಜ್ಯ ಸರ್ಕಾರ ದಾಖಲೆಗಳನ್ನು ನೀಡಿದೆ. ಅದನ್ನು ಪರಿಶೀಲಿಸಿದ ಬಳಿಕ ಸುಪ್ರೀಂ ಕೋರ್ಟ್ ನ್ಯಾಯಾಧೀಶರು “ದರ್ಶನ್ ಜಾಮೀನನ್ನು ಯಾಕೆ ರದ್ದು ಮಾಡಬಾರದು?” ಎಂದು ಪ್ರಶ್ನೆ ಮಾಡಿದ್ದಾರೆ.
ಜಾಮೀನು ನೀಡುವಾಗ ಹೈಕೋರ್ಟ್ ತನ್ನ ವಿವೇಚನೆಯನ್ನು ಸೂಕ್ತವಾಗಿ ಬಳಸಿಲ್ಲ ಎಂದು ನ್ಯಾ. ಪರ್ದಿವಾಲಾ ಆಕ್ಷೇಪಿಸಿದ್ದರು. ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಹೈಕೋರ್ಟ್ ಆದೇಶವನ್ನು ಹೇಗೆ ನೀಡಿದೆ ಎನ್ನುವುದನ್ನು ನೀವು ಗಮನಿಸಿರಬಹುದು ಎಂದು ಸಿಬಲ್ ಅವರಿಗೆ ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ಹೈಕೋರ್ಟ್, ನಟ ದರ್ಶನ್ ಹಾಗೂ ಉಳಿದವರಿಗೆ ಜಾಮೀನು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಜುಲೈ 22ರಂದು ವಿಸ್ತೃತವಾಗಿ ಪ್ರಕರಣವನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ನ್ಯಾಯಪೀಠ ತಿಳಿಸಿದೆ. ಎರಡೂ ಕಡೆಯ ವಕೀಲರಿಗೆ ವಾದಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಜುಲೈ 22 ರಂದು ನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಜಾಮೀನು ಮುಂದುವರಿಯುತ್ತಾ ಇಲ್ಲ ಮತ್ತೆ ದರ್ಶನ್ ಜೈಲು ಪಾಲಾಗಬೇಕಾಗುತ್ತಾ ಎಂಬುದು ನಿರ್ಧಾರವಾಗಲಿದೆ.
ಸದ್ಯ ದರ್ಶನ್ ‘ಡೆವಿಲ್’ ಸಿನಿಮಾದ ಶೂಟಿಂಗ್ಗಾಗಿ ಥೈಲ್ಯಾಂಡ್ನಲ್ಲಿ ಬೀಡುಬಿಟ್ಟಿದ್ದಾರೆ. ಅಲ್ಲಿ ಹಾಡುಗಳು ಹಾಗೂ ಕೆಲವು ಸೀನ್ಗಳನ್ನು ಚಿತ್ರೀಕರಣ ಮಾಡಲಾಗುತ್ತಿದೆ.
——





Be the first to comment