ನವೆಂಬರ್ 24ರಂದು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ರಿಲೀಸ್

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ಸಿನಿಮಾ ರಿಲೀಸ್ ಬಗ್ಗೆ ಆಪಲ್ ಬಾಕ್ಸ್ ಸೋಶಿಯಲ್ ಮೀಡಿಯಾ ತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಎಲ್ಲರಿಗೂ ವಿಜಯದಶಮಿ ಹಬ್ಬದ ಶುಭಾಶಯಗಳು. ನಮ್ಮ ಚಿತ್ರ ಸ್ವಾತಿ ಮುತ್ತಿನ ಮಳೆ ಹನಿಯೇ ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ’ ಎಂದು ಬಿಡುಗಡೆ ದಿನಾಂಕ ತಿಳಿಸಲಾಗಿದೆ.

ನಟಿ ರಮ್ಯಾ ಅವರು ತಮ್ಮ ನಿರ್ಮಾಣ ಸಂಸ್ಥೆ ‘ಆಯಪಲ್ ಬಾಕ್ಸ್ ಸ್ಟುಡಿಯೋ’ ಮೂಲಕ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. . ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಾಣ ಮಾಡುವ ಜೊತೆಗೆ ಈ ಚಿತ್ರದಲ್ಲಿ ನಟಿಸುವುದಾಗಿ ರಮ್ಯಾ ಅವರು ಮೊದಲು ಹೇಳಿದ್ದರು. ಆದರೆ ಬಳಿಕ ಮನಸ್ಸು ಬದಲಿಸಿದರು. ಈ ಚಿತ್ರದಲ್ಲಿ ರಾಜ್​ ಬಿ ಶೆಟ್ಟಿಗೆ ಜೊತೆಯಾಗಿ ಸಿರಿ ರವಿಕುಮಾರ್ ನಟಿಸಿದ್ದಾರೆ.

ಈ ಚಿತ್ರದ ಶೂಟಿಂಗ್ ಮುಗಿದು ಬಹಳ ಸಮಯ ಕಳೆದಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ರಿಲೀಸ್​​ ದಿನಾಂಕ ರಮ್ಯಾ ಅಭಿಮಾನಿಗಳಿಗೆ ಖುಷಿ ನೀಡಿದೆ. ಎಲ್ಲರೂ  ಸಿನಿಮಾ ಗೆಲುವು ಕಾಣಲಿ ಎಂದು ಹಾರೈಸಿದ್ದಾರೆ.

ರಮ್ಯಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದರು. ‘ಉತ್ತರಕಾಂಡ’ ಚಿತ್ರದಲ್ಲಿ ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ.

ಸಿನಿಮಾರಂಗದಿಂದ ರಾಜಕೀಯದಲ್ಲಿ ತೊಡಗಿಸಿಕೊಂಡ ರಮ್ಯ ಅವರು ನಿರ್ಮಾಪಕಿ ಆಗಿ ತಮ್ಮ ಅದೃಷ್ಟವನ್ನು ಈ ಸಿನಿಮಾದ ಮೂಲಕ ಪರೀಕ್ಷೆ ಮಾಡುತ್ತಿದ್ದಾರೆ. ಚಿತ್ರ ಯಾವ ರೀತಿ ಯಶಸ್ಸು ಕಾಣುತ್ತದೆ ಎನ್ನುವುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!