ಇಂದಿನಿಂದ ತಮನ್ನಾ ಮೈಸೂರು ಸ್ಯಾಂಡಲ್ ಸೋಪ್ ಪ್ರಚಾರ ರಾಯಭಾರಿ

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಸಂಸ್ಥೆ (ಕೆಎಸ್‌ಡಿಎಲ್ ) ತನ್ನ ಮೈಸೂರು ಸ್ಯಾಂಡಲ್ ಸೋಪ್ ಮಾರುಕಟ್ಟೆ ಬಲವರ್ಧನೆಗಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಇಂದಿನಿಂದ 2 ವರ್ಷದ ಅವಧಿಗೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿದೆ.

ಈ ಸಂದರ್ಭದಲ್ಲಿ ಮೈಸೂರು ಸ್ಯಾಂಡಲ್ ಸೋಪನ್ನು  ನವೀನ ರೂಪದಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಕೆಎಸ್‌ಡಿಎಲ್ ಸಂಸ್ಥೆಯ ವಾರ್ಷಿಕ ವಹಿವಾಟನ್ನು2030ರ ವೇಳೆಗೆ 5,000 ಕೋಟಿ ರೂಪಾಯಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ.  ಯುವಜನಾಂಗವನ್ನು ತಲುಪುವ ಉದ್ದೇಶದಿಂದ ವ್ಯಾಪಕ ಪ್ರಚಾರ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ 30 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ತಮನ್ನಾ ಭಾಟಿಯಾ ಅವರ ನೇಮಕಾತಿಯಿಂದ ಉತ್ತರ ಭಾರತದ ಮಾರುಕಟ್ಟೆಯಲ್ಲಿ ಸಂಸ್ಥೆಯ ಉತ್ಪನ್ನಗಳಿಗೆ ಬಲ ಸಿಗಲಿದೆ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಸಂಸ್ಥೆ ಪ್ರಸ್ತುತ  ಮೈಸೂರು ಸ್ಯಾಂಡಲ್ ಸೋಪಿನಿಂದ ಹಿಡಿದು ಕುಡಿಯುವ ನೀರಿನವರೆಗೂ  57 ಉತ್ಪನ್ನಗಳನ್ನು ತಯಾರಿಸುತ್ತಿದೆ.  ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ತಮನ್ನಾ ಇತರ ಖಾಸಗಿ ಕಂಪನಿಗಳ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಕೆಎಸ್‌ಡಿಎಲ್ ತಿಳಿಸಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!