ಯೋಗಿ ಅಭಿನಯದ ಲಂಕೆ ಸಿನಿಮಾ ತೆಲುಗಿಗೆ ರೀಮೇಕ್ ಆಗುತ್ತಿದೆ ಎಂದು ಚಿತ್ರದ ನಿರ್ದೇಶಕ ರಾಮ್ ಪ್ರಸಾದ್ ಹೇಳಿದ್ದಾರೆ.
ತೆಲುಗು ಅವತರಣಿಕೆಯ ರಿಮೇಕ್ ಬಗ್ಗೆ ಎಲ್ಲಾ ಮಾಹಿತಿಯನ್ನು ಲಂಕೆ ಸಿನಿಮಾದ 50ನೇ ದಿನೋತ್ಸವದ ಸಂದರ್ಭ ಹಂಚಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕರೋನಾ ಕಾರಣದಿಂದ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಮಾತ್ರ ಆಸನಗಳ ಭರ್ತಿಗೆ ಅವಕಾಶ ನೀಡಿದ ಸಂದರ್ಭದಲ್ಲಿ ಈ ಚಿತ್ರ ಬಿಡುಗಡೆ ಆಗಿತ್ತು.
‘ಲಂಕೆ’ ಚಿತ್ರ ಲೈಂಗಿಕ ಕೆಲಸಗಾರರ ಮೇಲೆ ನಡೆಯುವ ದೌರ್ಜನ್ಯದ ವಿರುದ್ಧ ಹೀರೋ ಹೋರಾಡುವ ಕಥೆ ಹೊಂದಿದ್ದು, ಆಕ್ಷನ್ ಪ್ರಕಾರದ ಈ ಸಿನೆಮಾಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈ ಚಿತ್ರವನ್ನು ಬೆಂಗಳೂರು, ಸಂಗಮ ಫಾರೆಸ್ಟ್‌ನಲ್ಲಿ ಚಿತ್ರೀಕರಿಸಲಾಗಿತ್ತು. ಇತ್ತೀಚೆಗೆ ನಿಧನ ಹೊಂದಿದ ಸಂಚಾರಿ ವಿಜಯ್ ಅವರೂ ಸಹ ಮುಖ್ಯ ಪಾತ್ರದಲ್ಲಿ ನಟಿಸಿರುವುದು ಚಿತ್ರದ ವಿಶೇಷ ಆಗಿದೆ.
ಚಿತ್ರದಲ್ಲಿ ಯೋಗೇಶ್ ಜೊತೆಗೆ ಕಾವ್ಯ ಶೆಟ್ಟಿ, ಕೃಷಿ ತಾಪಂಡ ಅವರು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಕಾರ್ತಿಕ್ ಶರ್ಮಾ ಸಂಗೀತ, ಶ್ರೀನಿವಾಸ್ ನಾಗವಾರ, ಶ್ರೀಮತಿ ಸುರೇಖಾ ರಾಮ್ ಪ್ರಸಾದ್ ನಿರ್ಮಾಣ ಮಾಡಿದ್ದಾರೆ.
Be the first to comment