ಚಿತ್ರರಂಗಕ್ಕೆ ಖಡಕ್ ಸೂಚನೆ ನೀಡಿದ ಸಿಎಂ

ಪುಷ್ಪ 2 ಸಿನಿಮಾದ ಪ್ರೀಮಿಯರ್ ವೇಳೆ ಸಂಭವಿಸಿದ ಕಾಲ್ತುಳಿತದಿಂದ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಖಡಕ್ ಸೂಚನೆಗಳನ್ನು ನೀಡಿದ್ದಾರೆ.

ಸರ್ಕಾರ ಮತ್ತು ಚಿತ್ರರಂಗದ ನಡುವೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ಸಂಧಾನ ಸಭೆ ನಡೆಸಲಾಗಿದ್ದು,  ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಚಿತ್ರರಂಗಕ್ಕೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಜನರನ್ನು ನಿಯಂತ್ರಿಸುವ ಜವಾಬ್ದಾರಿ ಪೊಲೀಸರಷ್ಟೇ ಸೆಲೆಬ್ರಿಟಿಗಳಿಗೂ ಇರಬೇಕು. ಇಂಥ ಸಂದರ್ಭಗಳಲ್ಲಿ ಶಾಂತಿ ಕಾಪಾಡಲು ಸೆಲೆಬ್ರಿಟಿಗಳು ಪೊಲೀಸರಿಗೆ ನೆರವು ನೀಡಬೇಕು ಎಂದು  ಹೇಳಿದ್ದಾರೆ.

ಸಿನಿಮಾಗಳ ವಿಶೇಷ ಪ್ರದರ್ಶನಗಳನ್ನು ಏರ್ಪಡಿಸಿದಾಗ ಇಂಥ ದುರ್ಘಟನೆಗಳು ನಡೆಯುತ್ತವೆ.  ಸದ್ಯಕ್ಕೆ ಎಲ್ಲ ರೀತಿಯ ಸ್ಪೆಷಲ್ ಶೋಗಳನ್ನು ನಿಷೇಧಿಸಲಾಗಿದೆ.  ಸೆಲೆಬ್ರಿಟಿಗಳು ತಮ್ಮ ಸ್ವಂತ ಬೌನ್ಸರ್​ಗಳನ್ನು ನೇಮಿಸಿಕೊಂಡಾಗ ಬೌನ್ಸರ್​ಗಳು ಜನರೊಂದಿಗೆ ಅಪಾಯಕಾರಿಯಾಗಿ ನಡೆದುಕೊಳ್ಳುವಂತಿಲ್ಲ ಎಂದು  ರೇವಂತ್ ರೆಡ್ಡಿ  ಎಚ್ಚರಿಗೆ ನೀಡಿದ್ದಾರೆ.

ಅಲ್ಲು ಅರ್ಜುನ್ ಅವರು ‘ಸಂಧ್ಯಾ’ ಚಿತ್ರಮಂದಿರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬೌನ್ಸರ್​ಗಳು ಜನರ ಜೊತೆ ನಡೆದುಕೊಂಡ ರೀತಿಯನ್ನು ಪೊಲೀಸರು ಖಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರೇವಂತ್ ರೆಡ್ಡಿ  ಎಲ್ಲ ಬೌನ್ಸರ್​ಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್, ನಿರ್ಮಾಪಕ ದಿಲ್ ರಾಜು, ನಟ ಅಕ್ಕಿನೇನಿ ನಾಗಾರ್ಜುನ, ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಮುಂತಾದವರು ಸಂಭೆಯಲ್ಲಿ ಭಾಗಿ ಆಗಿದ್ದರು.

ಅಲ್ಲು ಅರ್ಜುನ್ ಅವರು ‘ಸಂಧ್ಯಾ’ ಚಿತ್ರಮಂದಿರಕ್ಕೆ ಭೇಟಿ ನೀಡಿದಾಗ ರೇವತಿ ಎಂಬ ಅಭಿಮಾನಿಯು ಕಾಲ್ತುಳಿತದಿಂದ ಮೃತರಾದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ  ಅಲ್ಲು ಅರ್ಜುನ್ ರನ್ನು ಪೊಲೀಸರು ಬಂಧಿಸಿದ ಬಳಿಕ ಬಿಡುಗಡೆ ಮಾಡಿದ್ದರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!