ಜನಪ್ರಿಯ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ‘ಸೂತ್ರಧಾರಿ’ ಚಿತ್ರ ಬಿಡುಗಡೆ ಮುನ್ನ ಚಿತ್ರತಂಡ ಟೆಂಪಲ್ ರನ್ ಮಾಡಿದೆ.
ನಿರ್ಮಾಪಕ, ನಿರ್ದೇಶಕ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಸ್ಥಾಪಕ ನವರಸನ್ ನಿರ್ಮಾಣದ, ಕಿರಣ್ ಕುಮಾರ್ ನಿರ್ದೇಶನದ ‘ಸೂತ್ರಧಾರಿ’ ಚಿತ್ರ ಮೇ 9 ರಂದು ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಗೂ ಮುನ್ನ ನಿರ್ಮಾಪಕ ನವರಸನ್, ನಿರ್ದೇಶಕ ಕಿರಣ್ ಕುಮಾರ್, ನಾಯಕ ಚಂದನ್ ಶೆಟ್ಟಿ ಹಾಗೂ ನಾಯಕಿ ಅಪೂರ್ವ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ.
ಏಳುಬೆಟ್ಟದ ಒಡೆಯನ ಹತ್ತಿರ ಚಿತ್ರತಂಡದ ಸದಸ್ಯರು ಚಿತ್ರ ಯಶಸ್ವಿಯಾಗಲೆಂದು ಪ್ರಾರ್ಥನೆ ಮಾಡಿದ್ದಾರೆ. ಚಿತ್ರತಂಡ ಕಾಣಿಪಕ್ಕಂ ನ ಗಣೇಶ, ತಿರುಚಾನೂರು ಪದ್ಮಾವತಿ ಅಮ್ಮ ಹಾಗೂ ಗೋಲ್ಡನ್ ಟಂಪಲ್ ನ ಮಹಾಲಕ್ಷ್ಮಿ ದೇವಸ್ಥಾನಕ್ಕೂ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದೆ.
ಚಿತ್ರದಲ್ಲಿ ಚಂದನ್ ಶೆಟ್ಟಿ, ಸಂಜನಾ ಆನಂದ್, ಅಪೂರ್ವ, ಗಣೇಶ್ ನಾರಾಯಣ್, ಪ್ರಶಾಂತ್ ನಟನ, ಮೀರಾಶ್ರೀ, ಸುಶ್ಮಿತಾ, ಪಲ್ಲವಿ ಮುಂತಾದವರು ನಟಿಸಿದ್ದಾರೆ. ‘ಸೂತ್ರಧಾರಿ’ ಚಿತ್ರದ ಹಾಡುಗಳು ಟ್ರೆಂಡಿಂಗ್ ನಲ್ಲಿದೆ.

Be the first to comment