‘ದಿ ಡಾರ್ಕ್ ವೆಬ್​’ ಫಸ್ಟ್​​ ಲುಕ್​ ಬಿಡುಗಡೆ

ಸೈಬರ್ ಕ್ರೈಂ ಆಧಾರಿತ ‘ದಿ ಡಾರ್ಕ್ ವೆಬ್’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ.

ಪತ್ರಕರ್ತ ಮಂಜು ಬನವಾಸೆ ಹಾಗೂ ಹೆತ್ತೂರು ನಾಗರಾಜ್ ಎಂ.ಎನ್​ ತಮ್ಮ ಸಿನಿಮಾ ಬ್ಯಾನರ್ ಅಡಿಯಲ್ಲಿ ಸೈಬರ್ ಕ್ರೈಂ ಆಧಾರಿತ ‘ದಿ ಡಾರ್ಕ್ ವೆಬ್’ ಎಂಬ ಸಿನಿಮಾ ನಿರ್ಮಿಸಿದ್ದು, ಸಿನಿಮಾದ ಫಸ್ಟ್ ಲುಕ್ ನ್ನು ನಟ ವಸಿಷ್ಠ ಸಿಂಹ ರಿಲೀಸ್ ಮಾಡಿದ್ದಾರೆ.

ಹಾಸನದ ಪತ್ರಕರ್ತರು ಸೇರಿ ಮಾಡಿರುವ ಸಿನಿಮಾ ಬಗ್ಗೆ ವಸಿಷ್ಠ ಸಿಂಹ ಮೆಚ್ಚುಗೆಯ ಮಾತುಗಳನ್ನಾಡಿ,  “ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರಿಯಸಿ ಎಂಬ ಮಾತಿನಂತೆ ನಮ್ಮೂರು ಎಂದರೆ ಬರುವ ಭಾವನೆಯೇ ಬೇರೆ. ನನ್ನೂರು ಹಾಸನ ಎನ್ನುವುದು ಹೆಮ್ಮೆ. ಈಗ ಇಲ್ಲಿಯೂ ಸಾಕಷ್ಟು ಜನರು ಚಿತ್ರೋದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಆ ಸಂಖ್ಯೆ ಇನ್ನೂ ಹೆಚ್ಚಬೇಕು” ಎಂದರು.

‘ದಿ ಡಾರ್ಕ್ ವೆಬ್’ ಸಿನಿಮಾದ ನಾಯಕನಾಗಿ ಚೇತನ್ ಕಾಣಿಸಿಕೊಂಡಿದ್ದಾರೆ. ಬಹುತೇಕ ಪತ್ರಕರ್ತರೇ ಅಭಿನಯಿಸಿರುವುದು ವಿಶೇಷತೆ. ಮಂಜು ಬನವಾಸೆ ನಿರ್ಮಾಣದ ಜೊತೆಗೆ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಕಿರಣ್ ಸ್ವಾಮಿ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಚಂದ್ರಮೌಳಿ ಕ್ಯಾಮೆರಾ ವರ್ಕ್, ವಿಶಾಕ್ ನಾಗಲಾಪುರ ಸಂಗೀತ ನೀಡಿದ್ದಾರೆ.

‘ದಿ ಡಾರ್ಕ್ ವೆಬ್’  ಬಿಡುಗಡೆಗೆ ಸಜ್ಜಾಗುತ್ತಿದೆ.

——-

Be the first to comment

Leave a Reply

Your email address will not be published. Required fields are marked *

Translate »
error: Content is protected !!