ಕ್ರೇಜಿಸ್ಟಾರ್ ರವಿಚಂದ್ರನ್ ಕರಿ ಕೋಟ್ ಧರಿಸಿ ನಟಿಸಿರುವ ಚಿತ್ರ ‘ದಿ ಜಡ್ಜ್ಮೆಂಟ್’ ಡಬ್ಬಿಂಗ್ ಕೆಲಸ ಭರದಿಂದ ಸಾಗಿದೆ.
ದಿ ಜಡ್ಜ್ಮೆಂಟ್ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದ್ದು, ಡಬ್ಬಿಂಗ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ರವಿಚಂದ್ರನ್, ದಿಗಂತ್, ಧನ್ಯಾ ರಾಮ್ಕುಮಾರ್, ಮೇಘನಾ ಗಾಂವ್ಕರ್, ಪ್ರಕಾಶ್ ಬೆಳವಾಡಿ ತಮ್ಮ ಪಾತ್ರಗಳಿಗೆ ದನಿ ನೀಡುತ್ತಿದ್ದಾರೆ.
ದಿ ಜಡ್ಜ್ಮೆಂಟ್ ಸಿನಿಮಾ ಲೀಗಲ್ ಥ್ರಿಲ್ಲರ್ ಆಗಿದ್ದ, ರಾಜ್ಯಾಂಗ ಮತ್ತು ನ್ಯಾಯಾಂಗದ ಸುತ್ತ ನಡೆಯುವ ಘಟನೆಗಳನ್ನು ಬಳಸಿಕೊಂಡು ಕಾಲ್ಪನಿಕ ಕಥೆ ಹೆಣೆಯಲಾಗಿದೆ. ಈ ಸಿನಿಮಾ ಪ್ರೇಕ್ಷಕರಿಗೆ ಹೊಸ ಅನುಭವ ಕೊಡಲಿದೆ ಎಂದು ನಿರ್ದೇಶಕ ಗುರುರಾಜ ಕುಲಕರ್ಣಿ ನಾಡಗೌಡ ಹೇಳಿದ್ದಾರೆ.
ರವಿಚಂದ್ರನ್, ದಿಗಂತ್ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮ್ಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ.ಎಸ್ ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ಸುಜಯ್ ಶಾಸ್ತ್ರಿ, ರಾಜೇಂದ್ರ ಕಾರಂತ್, ರವಿಶಂಕರ್ ಗೌಡ, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ರೂಪಾ ರಾಯಪ್ಪ, ಪ್ರೀತಮ್, ಬಾಲಾಜಿ ಮನೋಹರ್, ಅರವಿಂದ್ ಕುಪ್ಳೀಕರ್, ಜಗದೀಶ್ ಮಲ್ನಾಡ್ ಸೇರಿದಂತೆ ಹಲವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಚಿತ್ರಕ್ಕೆ ಪಿ.ಕೆ.ಹೆಚ್. ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ.ಎಸ್ ಸಂಕಲನ, ಪ್ರಮೋದ್ ಮರವಂತೆ ಹಾಡುಗಳು ಇವೆ. ಎಂ.ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ. ರವಿವರ್ಮಾ ಸಾಹಸ ನಿರ್ದೇಶನ, ರೂಪೇಂದ್ರ ಆಚಾರ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ಜಿ9 ಕಮ್ಯೂನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ವಿಶ್ವನಾಥ ಗುಪ್ತಾ, ರಾಮು ರಾಯಚೂರು ಮತ್ತು ರಾಜಶೇಖರ ಪಾಟೀಲ್ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ದಿ ಜಡ್ಜ್ಮೆಂಟ್ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲು ಸಿದ್ದವಾಗಿದೆ.
—
![](https://bcinemas.in/wp-content/uploads/2020/11/whatsapp.png)
Be the first to comment