ʼದಿ ಕೇರಳ ಸ್ಟೋರಿʼ ಪ್ರದರ್ಶನಕ್ಕೆ ಪಶ್ಚಿಮ ಬಂಗಾಳ ಸರ್ಕಾರದ ನಿರ್ಭಂದವನ್ನು ತೆರವುಗೊಳಿಸಬೇಕು ಎಂದು ʼದಿ ಕೇರಳ ಸ್ಟೋರಿʼ ಚಿತ್ರದ ನಿರ್ಮಾಪಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಚಿತ್ರತಂಡದ ಪರ ವಾದ ನಡೆಸಿದ ವಕೀಲ ಹರೀಶ್ ಸಾಳ್ವೆ ʼಚಿತ್ರದ ನಿರ್ಮಾಪಕರು ದಿನೇ ದಿನೇ ಹಣ ಕಳೆದುಕೊಳ್ಳುತ್ತಿದ್ದಾರೆ. ಈಗ ಮತ್ತೊಂದು ರಾಜ್ಯ ಚಿತ್ರ ನಿಷೇಧಕ್ಕೆ ಮುಂದಾಗಿದೆ. ಎಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಏಕಸದಸ್ಯ ಮಾಹಿತಿ ನೀಡಿದರು.
ಈ ವಿಚಾರಕ್ಕೆ ಸಂಬಂಧಿಸಿದಂಥೆ ಮುಖ್ಯ ನ್ಯಾಯ ಮೂರ್ತಿಗಳು ಪಶ್ಚಿಮ ಬಂಗಾಳ ರಾಜ್ಯಕ್ಕೆ ನೋಟಿಸ್ ನೀಡುವಂತೆ ತಿಳಿಸಿದ್ದಾರೆ.
ತಮ್ಮ ರಾಜ್ಯದಲ್ಲಿ ಕೋಮು ದ್ವೇಷ ಹರಡುತ್ತಿರುವ ಚಿತ್ರವನ್ನು ನಿಷೇಧಿಸಿ, ರಾಜ್ಯದಲ್ಲಿ ಶಾಂತಿಯನ್ನು ಕಾಪಾಡಲು ಈ ಕ್ರಮವನ್ನು ಕೈಗೊಂಡಿದ್ದೇವೆ ಎಂದು ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದರು. ತಮಿಳುನಾಡಿನ ಮಲ್ಟಿಪ್ಲೆಕ್ಸ್ ಮಾಲೀಕರ ಸಂಘ ಕೂಡ ಈ ಸಿನಿಮಾವನ್ನು ರದ್ದುಗೊಳಿಸಿತ್ತು.
ʼದಿ ಕೇರಳ ಸ್ಟೋರಿʼ ಚಿತ್ರವನ್ನು ನಿಷೇಧಿಸಿದ ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರವನ್ನು ಬಾಲಿವುಡ್ನ ನಿರ್ದೇಶಕ ಅನುರಾಗ್ ಕಶ್ಯಪ್ ಖಂಡಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, “ನೀವು ಸಿನಿಮಾವನ್ನು ಒಪ್ಪುತ್ತಿರೋ ಇಲ್ಲವೋ, ಆ ಸಿನಿಮಾ ಷಡ್ಯಂತ್ರದ ಭಾಗವಾಗಿರಲಿ ಅಥವಾ ಷಡ್ಯಂತ್ರಕ್ಕೆ ತಿರುಗೇಟು ನೀಡುವ ಕಥಾಹಂದರವನ್ನೇ ಹೊಂದಿರಲಿ, ಅಕ್ರಮಣಕಾರಿ ಪರಿಭಾಷೆಯನ್ನೇ ಹೊಂದಿರಲಿ. ಆದರೆ ಚಿತ್ರವನ್ನು ನಿಷೇಧಿಸುವುದು ಸರಿಯಲ್ಲ” ಎಂದಿದ್ದಾರೆ.
ಕೇರಳದ 32000 ಯುವತಿಯರನ್ನು ಬಲವಂತವಾಗಿ ಮತಾಂತರಿಸಿ ಭಯೋತ್ಪಾದಕ ಸಂಘಟನೆಗಳಿಗೆ ಸೇರಿಸಲಾಗುತ್ತಿತ್ತು ಎನ್ನುವುದು ಸಿನಿಮಾದ ಕಥೆ ಆಗಿದೆ. ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
——
Be the first to comment