The kerala story: ರಾಜ್ಯದಲ್ಲಿ ದಿ ಕೇರಳ ಸ್ಟೋರಿ ಶೀಘ್ರವೇ ಬ್ಯಾನ್?

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ ಬಳಿಕ ದಿ ಕೇರಳ ಸ್ಟೋರಿ ಸಿನಿಮಾ ನಿಷೇಧ ಆಗುವ ಸಾಧ್ಯತೆ ಇದೆ ಎನ್ನುವ ಮಾತು ಕೇಳಿ ಬಂದಿದೆ.

ಇದಕ್ಕೆ ಪೂರಕ ಎನ್ನುವಂತೆ ವಿಜಯಪುರದಲ್ಲಿ ಹಿಂದೂ ಯುವತಿಯರಿಗೆ ಚಿತ್ರ ತೋರಿಸಲು ಶಾಸಕ ಯತ್ನಾಳ್‌ ಅವರು ಚಿತ್ರ ಮಂದಿರ ಬುಕ್ ಮಾಡಿದ್ದಾರೆ.

ವಿಜಯಪುರದ ಅಪ್ಸರಾ ಚಿತ್ರ ಮಂದಿರದಲ್ಲಿ ಮೂರು ದಿನಗಳ ಕಾಲ ಉಚಿತವಾಗಿ ಸಿನಿಮಾ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದೆ. ಮೇ, 16,17,18 ರಂದು ಬೆಳಿಗ್ಗೆ 12 ಗಂಟೆಯ ಶೋ ಉಚಿತವಾಗಿ ವೀಕ್ಷಣೆ ಮಾಡಬಹುದು. ವಿಜಯಪುರ ಹಿಂದೂ ಯುವತಿಯರು ಸಿನಿಮಾ ನೋಡುವಂತೆ ಯತ್ನಾಳ ಬೆಂಬಲಿಗರು ಕರೆ ಕೊಟ್ಟಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಚಿತ್ರಕ್ಕೆ ನಿಷೇಧ ಹೇರಲಾಗಿದೆ. ಬಿಜೆಪಿ ಆಡಳಿತವಿರುವ ಮಧ್ಯಪ್ರದೆಶ ಮತ್ತು ಉತ್ತರಪ್ರದೇಶದಗಳಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.

ತಮಿಳುನಾಡು ಹಾಗೂ ಪಶ್ಚಿಮ ಬಂಗಳದಲ್ಲಿ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡದಿರುವ ಬಗ್ಗೆ ಚಿತ್ರತಂಡ ಈಗಾಗಲೇ ಕೋರ್ಟ್‌ ಮೊರೆ ಹೋಗಿದ್ದು, ಸುಪ್ರಿಂ ಕೋರ್ಟ್ ಈ ಬಗ್ಗೆ ಸರಕಾರದಿಂದ ವಿವರಣೆ ಕೋರಿದೆ.
ಕೇರಳದಲ್ಲಿ ದಿ ಕೇರಳ ಸ್ಟೋರಿ ಸಿನಿಮಾವನ್ನು ರಿಲೀಸ್ ಮಾಡಲು ಹಲವು ಥಿಯೇಟರ್​ಗಳು ಹಿಂದೇಟು ಹಾಕಿವೆ. ಸಿನಿಮಾ ವಿರುದ್ಧ ಪ್ರತಿಭಟನೆ ಭಯ ಇರುವುದರಿಂದ ಸಿನಿಮಾ ಪ್ರದರ್ಶನಕ್ಕೆ ಚಿತ್ರಮಂದಿರಗಳು ಮನಸ್ಸು ಮಾಡಿಲ್ಲ.

ಅದಾ ಶರ್ಮಾ,ಯೋಗಿತಾ ಬಿಹಾನಿ ,ಸೋನಿಯಾ ಬಲಾನಿ, ಸಿದ್ಧಿ ಇದ್ನಾನಿ ಮುಂತಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!