ಕಿಚ್ಚ ಸುದೀಪ್ ಅವರಿಗೆ ಬೆದರಿಕೆ ಪತ್ರ ಬಂದಿರುವ ಕಾರಣ ಪೊಲೀಸ್ ದೂರು ನೀಡಲಾಗಿದೆ.
ಸುದೀಪ್ ಅವರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬಂದ ಬೆನ್ನಲ್ಲೇ ಅವರ ಮನೆಗೆ ಎರಡು ಬೆದರಿಕೆ ಪತ್ರಗಳು ಬಂದಿವೆ. ಈ ಸಂಬಂಧ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸುದೀಪ್ ಅವರ ಆಪ್ತ ಜಾಕ್ ಮಂಜ ಅವರು ಈ ಬಗ್ಗೆ ದೂರು ನೀಡಿದ್ದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಬೆದರಿಕೆ ಪತ್ರ ಅನಾಮಧೇಯ ಹೆಸರಿನಲ್ಲಿ ಬರೆಯಲಾಗಿದೆ. ಮಾರ್ಚ್ 29ರಂದು ಸುದೀಪ್ ಅವರ ಮನೆಗೆ ಈ ಪತ್ರಗಳು ತಲುಪಿವೆ ಎಂದು ಹೇಳಲಾಗಿದೆ.
ಬೆದರಿಕೆ ಪತ್ರದಲ್ಲಿ ಸುದೀಪ್ ಹಾಗೂ ಅವರ ಪೋಷಕರನ್ನು ನಿಂದಿಸಲಾಗಿದೆ. ಅಲ್ಲದೇ ವಿಡಿಯೊ ಬಹಿರಂಗ ಪಡಿಸುತ್ತೇವೆ ಎಂದು ಬೆದರಿಕೆ ಹಾಕಲಾಗಿದೆ. ಬೆದರಿಕೆ ಸಂಬಂಧ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್. ಯಡಿಯೂರಪ್ಪ ಜೊತೆ ಕಿಚ್ಚ ಸುದೀಪ್ ಮಾತುಕತೆ ನಡೆದಿದೆ ಎಂದು ಹೇಳಲಾಗಿತ್ತು. ಸುದೀಪ್ ಅವರು ಬಿಜೆಪಿ ಪರ ಆಸಕ್ತಿ ತೋರಿಸುವ ಸಾಧ್ಯತೆ ಹೆಚ್ಚಿದೆ ಎನ್ನುವ ಸುದ್ದಿ ಹೊರ ಬಿದ್ದಿತ್ತು.
—-
Be the first to comment