‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಚಿತ್ರಮಂದಿರಗಳು

ವಿವಾದದ ನಡುವೆಯೂ  ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಿತ್ರವನ್ನು ಪ್ರದರ್ಶನ ಮಾಡಲು ಕರ್ನಾಟಕದ ಕೆಲವು ಥಿಯೇಟರ್​ಗಳು ಮುಂದಾಗಿವೆ.

‘ಥಗ್ ಲೈಫ್’ ಚಿತ್ರ ಜೂನ್ 5ಕ್ಕೆ  ರಿಲೀಸ್ ಆಗಲಿದೆ. ಬೆಂಗಳೂರಿನ ಖ್ಯಾತ ಸಿಂಗಲ್​ ಸ್ಕ್ರೀನ್​ಗಳಲ್ಲಿ ಒಂದಾದ ‘ವಿಕ್ಟರಿ ಸಿನಿಮಾಸ್’, ಸಿನಿಮಾ ರಿಲೀಸ್ ಆದರೆ ಥಿಯೇಟರ್​ನಲ್ಲಿ ಚಿತ್ರ ಪ್ರದರ್ಶನ ಕಾಣಲಿದೆ ಎಂದು ಹೇಳಿದೆ.

‘ಥಗ್ ಲೈಫ್’ ಚಿತ್ರ ತಮಿಳು, ಹಿಂದಿ, ಮಲಯಾಳಂ ಹಾಗೂ ತೆಲುಗು ಭಾಷೆಯಲ್ಲಿ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಕನ್ನಡ ವರ್ಷನ್ ಇಲ್ಲ.   ಚಿತ್ರವನ್ನು ಮಣಿರತ್ನಂ ಅವರು ನಿರ್ದೇಶನ ಮಾಡಿದ್ದಾರೆ. ಕಮಲ್ ಹಾಸನ್, ಸಿಂಬು, ತ್ರಿಷಾ, ಅಶೋಕ್ ಸೆಲ್ವನ್, ಐಶ್ವರ್ಯಾ ಲಕ್ಷ್ಮಿ, ಅಭಿರಾಮಿ ಬೋಸ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಕಮಲ್ ಹಾಸನ್ ಅವರೇ ನಿರ್ಮಾಪಕರು ಆಗಿದ್ದಾರೆ.

ಕರವೇ ಅಧ್ಯಕ್ಷ ನಾರಾಯಣಗೌಡ, ಯಾವುದಾದರೂ ಚಿತ್ರಮಂದಿರಗಳು ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡಿದಲ್ಲಿ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದ ಕೆಲವು ಥಿಯೇಟರ್​ಗಳು ಥಗ್ ಲೈಫ್’ ಚಿತ್ರವನ್ನು ಪ್ರದರ್ಶನ ಮಾಡಲು ಮುಂದಾಗಿವೆ.

—-

 

Be the first to comment

Leave a Reply

Your email address will not be published. Required fields are marked *

Translate »
error: Content is protected !!