‘ಥಗ್ ಲೈಫ್’ ಬಿಡುಗಡೆಗೆ ಸುಪ್ರೀಂ ಒಪ್ಪಿಗೆ

ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಚಿತ್ರ  ‘ಥಗ್ ಲೈಫ್’ ಬಿಡುಗಡೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

‘ಥಗ್‌ ಲೈಫ್‌’ ಸಿನಿಮಾ ನಿಷೇಧ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿಂದು ನಡೆದಿದೆ.  ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಬೇಕು. ಸಿಬಿಎಫ್‌ಸಿ ಸರ್ಟಿಫಿಕೇಟ್ ಇದ್ದ ಚಿತ್ರವನ್ನು ಪ್ರತಿ ರಾಜ್ಯದಲ್ಲೂ ಬಿಡುಗಡೆ ಮಾಡಬೇಕು ಎಂದು ಕಾನೂನಿನ ನಿಯಮ ಹೇಳುತ್ತದೆ. ಚಿತ್ರ ಬಿಡುಗಡೆಗೆ ತಡೆ ನೀಡಿ ಜನರನ್ನು ಭಯಭೀತರನ್ನಾಗಿ ಮಾಡುವುದು, ಚಿತ್ರಮಂದಿರಗಳನ್ನು ಸುಡುವ ಬೆದರಿಕೆಗೆ ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಿನಿಮಾ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್   ನೀಡಿದೆ.  ಹೈಕೋರ್ಟ್​ನಲ್ಲಿ ಸಿನಿಮಾ ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​, ಟ್ರಾನ್ಸ್​ಫರ್​ ಮಾಡಿಕೊಂಡಿದೆ.  ಕರ್ನಾಟಕ ಹೈಕೋರ್ಟ್​ನಲ್ಲಿ ನಡೆಯಬೇಕಿದ್ದ ಮುಂದಿನ ಎಲ್ಲಾ ವಿಚಾರಣೆಗಳು ಸುಪ್ರೀಂ ಕೋರ್ಟ್​ನಲ್ಲಿ  ನಡೆಯಲಿವೆ.

‘ಥಗ್ ಲೈಫ್’ ಜೂನ್ 5ರಂದು ವರ್ಲ್ಡ್ ವೈಡ್‌ ರಿಲೀಸ್ ಆಗಿತ್ತು. ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂಬ ಹೇಳಿಕೆ ಕೊಟ್ಟ ಕಮಲ್‌ ಹಾಸನ್‌ ಚಿತ್ರವನ್ನು ರಾಜ್ಯದಲ್ಲಿ ರಿಲೀಸ್‌ ಮಾಡಬಾರದು ಎಂಬ  ಕನ್ನಡಿಗರ  ಪ್ರತಿಭಟನೆಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಗೆ ಅನುಮತಿ ಸಿಕ್ಕಿರಲಿಲ್ಲ.  ಕರ್ನಾಟಕದಲ್ಲಿ ಕಮಲ್ ಹಾಸನ್ ಸಿನಿಮಾ ಬಿಡುಗಡೆಯಾದ್ರೆ ಬಂದ್ ಮಾಡುವ ಎಚ್ಚರಿಕೆಯನ್ನು ನೀಡಲಾಗಿತ್ತು.

—-

 

 

Be the first to comment

Leave a Reply

Your email address will not be published. Required fields are marked *

Translate »
error: Content is protected !!