‘ಥಗ್ಸ್ ಆಫ್ ರಾಮಘಡ’ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ.
ಟ್ರೈಲರ್ ನಲ್ಲಿ ಅಪರಾಧ, ರಕ್ತ, ವೈಲೆನ್ಸ್ ನ ದೃಶ್ಯಗಳು ಜೋರಾಗಿಯೇ ಮೂಡಿ ಬಂದಿವೆ. ಚಿತ್ರ ಜ. 6ಕ್ಕೆ ರಿಲೀಸ್ ಆಗಲಿದೆ.
ಕಾರ್ತಿಕ್ ನಿರ್ದೇಶಿಸಿರುವ ಮೊದಲ ಸಿನಿಮಾ ಇದಾಗಿದೆ.
ಚಿತ್ರದ ಕಥೆ ಉತ್ತರ ಕರ್ನಾಟಕ ಭಾಗದಲ್ಲಿ 1995ರಲ್ಲಿ ನಡೆದ ಸತ್ಯ ಘಟನೆ ಆಧರಿಸಿದೆ. ಇದು ಕ್ರೈಂ ಕಲ್ಟ್ ಕಥಾಹಂದರದ ಸಿನಿಮಾ ಎಂದು ನಿರ್ದೇಶಕ ಕಾರ್ತಿಕ್ ಹೇಳಿದ್ದಾರೆ.
ಉತ್ತರ ಕರ್ನಾಟಕ ಭಾಗದ ಒಂದು ಚಿಕ್ಕ ಹಳ್ಳಿಯಲ್ಲಿ ನಡೆಯುವ ಕಥೆ ಇರುವ ಕಾರಣ ಪೂರ್ತಿ ಸಿನಿಮಾವನ್ನು ಉತ್ತರ ಕರ್ನಾಟಕದಲ್ಲಿ ಚಿತ್ರೀಕರಣ ನಡೆಸಲಾಗಿದೆ.
ಭಾರತ್ ಟಾಕೀಸ್ ನಡಿ ಜೈ ಕುಮಾರ್, ಕೀರ್ತಿ ರಾಜ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ರಾಜೇಶ್ ಕೃಷ್ಣನ್, ಶಶಾಂಕ್ ಶೇಷಗಿರಿ, ಅನುರಾಧ ಭಟ್ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ. ಹಾಡುಗಳು ಈಗಾಗಲೇ ಗಮನ ಸೆಳೆದಿವೆ.
ಮನು ದಾಸಪ್ಪ ಛಾಯಾಗ್ರಹಣ, ಶ್ರೀಧರ್ ಸಂಕಲನ, ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
___

Be the first to comment