ರವಿತೇಜ್ ನಟನೆಯ “ಟೈಗರ್ ನಾಗೇಶ್ವರ್ ರಾವ್” ಫಸ್ಟ್ ಲುಕ್ ಬಿಡುಗಡೆ.

ತೆಲುಗಿನ ಮಾಸ್ ಮಹಾರಾಜ ರವಿತೇಜ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್..ವಂಶಿ ನಿರ್ದೇಶನದಲ್ಲಿ ಅದ್ಧೂರಿಯಾಗಿ ತಯಾರಾಗಿರುವ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಭಾರತದ ಮೂರನೇ ಅತಿ ಉದ್ದದ ರಸ್ತೆ ಹಾಗೂ ರೈಲ್ವೆ ಸೇತುವೆ ಎನಿಸಿಕೊಂಡಿರುವ ರಾಜಮುಂಡ್ರಿಯಲ್ಲಿರುವ ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹ್ಯಾವ್ಲಾಕ್ ಸೇತುವೆ ಮೇಲೆ ಇಂದು ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿದೆ.

ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ನಲ್ಲಿ ರವಿತೇಜ, ಉಗ್ರವಾದ ರೂಪದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಬಿಯರ್ಡ್ ಲುಕ್, ಗಾಯವಾದ ಮುಖ, ಮಾಸ್ ಅವತಾರದಲ್ಲಿ ಮಾಸ್ ಮಹಾರಾಜ ಧಗಧಗಿಸಿದ್ದಾರೆ. ಪಂಚ ಭಾಷೆಯಲ್ಲಿ ರಿಲೀಸ್ ಆಗಿರುವ ಕನ್ನಡದ ಫಸ್ಟ್ ಲುಕ್ ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಧ್ವನಿಯಾಗಿದ್ದಾರೆ. ಭಾರತದ ಕುಖ್ಯಾತ ಕಳ್ಳ ಎನಿಸಿಕೊಂಡಿರುವ ಟೈಗರ್ ನಾಗೇಶ್ವರ್ ರಾವ್ ಪ್ರಪಂಚವನ್ನು ಶಿವಣ್ಣ ಪರಿಚಯಿಸಿದ್ದಾರೆ.

ಕನ್ನಡದಲ್ಲಿ ಶಿವಣ್ಣ, ತೆಲುಗಿನಲ್ಲಿ ವೆಂಕಟೇಶ್ ದಗ್ಗುಭಾಟಿ, ಬಾಲಿವುಡ್ ನಲ್ಲಿ ಜಾನ್ ಅಬ್ರಾಂ, ತಮಿಳಿನಲ್ಲಿ ಕಾರ್ತಿ ಹಾಗೂ ಮಲಯಾಳಂನಲ್ಲಿ ದುಲ್ಕರ್ ಸಲ್ಮಾನ್ ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ಗೆ ಧ್ವನಿಯಾಗಿದ್ದಾರೆ. ಜಿಂಕೆಯನ್ನು ಬೇಟೆಯಾಡುವ ಹುಲಿ ನೋಡಿರ್ತಿಯಾ..ಹುಲಿಗಳನ್ನು ಬೇಟೆಯಾಡುವ ಹುಲಿ ನೋಡಿರ್ತಿಯಾ ಎಂಬ ಪವರ್ ಫುಲ್ ಡೈಲಾಗ್ ಮೂಲಕ ರವಿತೇಜ ಮಾಸ್ ಆಗಿ ಎಂಟ್ರಿ ಕೊಟ್ಟಿದ್ದಾರೆ.

70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಕ್ಕಾಗಿ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿಯಲಿದ್ದು, ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗ್ತಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!