Raghavendra stores: ಇಂದು ತೆರೆ ಕಂಡ ಕನ್ನಡ ಚಿತ್ರಗಳು

ನವರಸ ನಾಯಕ ಜಗ್ಗೇಶ್​ ನಟನೆಯ ‘ರಾಘವೇಂದ್ರ ಸ್ಟೋರ್ಸ್​’ ಹಾಗೂ ವಿಜಯ್​ ರಾಘವೇಂದ್ರ ನಟನೆಯ ‘ರಾಘು’ ಚಿತ್ರ ಇಂದು ಬಿಡುಗಡೆಗೊಂಡಿವೆ.

ಹೊಂಬಾಳೆ ಸಂಸ್ಥೆ ನಿರ್ಮಾಣದ ರಾಘವೇಂದ್ರ ಸ್ಟೋರ್ಸ್‌ ಸಿನಿಮಾ ಮನೋರಂಜನೆ ನೀಡಲು ಚಿತ್ರಮಂದಿರಕ್ಕೆ ಬಂದಿದೆ. ಹೊಂಬಾಳೆ ಬ್ಯಾನರ್‌ ಅಡಿಯಲ್ಲಿ ಸಿದ್ಧವಾಗಿರುವ ಸಿನಿಮಾಕ್ಕೆ ರಾಜಕುಮಾರ ಸಿನಿಮಾ ಖ್ಯಾತಿಯ ಸಂತೋಷ್‌ ಆನಂದ್‌ ರಾಮ್‌ ಅವರು ಆಕ್ಷನ್‌ ಕಟ್‌ ಹೇಳಿದ್ದಾರೆ.

ಹಾಸ್ಯಭರಿತವಾಗಿರುವ ಈ ಸಿನಿಮಾದಲ್ಲಿ ಜಗ್ಗೇಶ್‌ ಅವರು 40 ವರ್ಷ ದಾಟಿದರೂ ಇನ್ನೂ ಮದುವೆಯಾಗದ ಅಡುಗೆ ಭಟ್ಟನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ರವಿಶಂಕರ್‌ ಗೌಡ ಮತ್ತು ನಟಿ ಶ್ವೇತಾ ಶ್ರೀವಾಸ್ತವ್‌ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.


ಕನ್ನಡದ ಬಹುತೇಕ ತಾರೆಯರು ಪ್ರೀಮಿಯರ್ ಶೋದಲ್ಲಿ ಈ ಚಿತ್ರವನ್ನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ನಟಿಸಿರುವ ಸೋಲೋ ಚಿತ್ರ ರಾಘು ರಾಜ್ಯಾದ್ಯಂತ ಬಿಡುಡೆ ಆಗಿದೆ. ರಾಘು ಸಿನಿಮಾ ಪೂರ್ತಿ ವಿಜಯ್ ರಾಘವೇಂದ್ರ ಒಬ್ಬರೇ ಕಾಣಿಸಿಕೊಳ್ಳಲಿದ್ದಾರೆ. ಯುವ ನಿರ್ದೇಶಕ ಎಂ ಆನಂದ್ ರಾಜ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾ ಪ್ರಯೋಗಾತ್ಮಕ ಚಿತ್ರವಾಗಿದೆ.

ಹೊಸ ಬಗೆ ಥ್ರಿಲ್ ನೀಡುವ ಈ ಸಿನಿಮಾ ಪೂರ್ತಿ ವಿಜಯ್ ರಾಘವೇಂದ್ರ ಒಬ್ಬರೇ ಇರಲಿದ್ದಾರೆ. , ಉದಯ್ ಲೀಲಾ ಛಾಯಾಗ್ರಹಣ, ವಿಜತೇತ್ ಚಂದ್ರ ಸಂಕಲನ, ರಿತ್ವಿಕ್ ಮುರುಳಿದರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಸೂರಜ್ ಜೋಯಿಸಿ ಸಂಗೀತ ನಿರ್ದೇಶನ ಮಾಡಿರುವ ಚಿತ್ರದ ಎರಡು ಹಾಡುಗಳಿಗೆ ವಾಸುಕಿ ವೈಭವ್ ಹಾಗೂ ಆಲ್‌ ಒಕೆ) ಧ್ವನಿ ನೀಡಿದ್ದಾರೆ.

ಇದೇ ವೇಳೆ ಬಹುತಾರಾಗಣದ ‘ಪೊನ್ನಿಯನ್​ ಸೆಲ್ವನ್​ 2’, . ಅಖಿಲ್​ ಅಕ್ಕಿನೇನಿ ಅಭಿನಯದ ‘ಏಜೆಂಟ್​’ ಸಿನಿಮಾ ಕೂಡ ಚಿತ್ರಮಂದಿರದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿವೆ.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!