ಟಾಕ್ಸಿಕ್

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ವೈರಲ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ‘ಮನಮೋಹಕ’ ಎಂಬ ರೋಮ್ಯಾಂಟಿಕ್ ವೀಡಿಯೋ ಹಾಡು ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.

ಹೊಸ ಹಾಡಿನಲ್ಲಿ ಯಶ್ ಹಾಗೂ ತಾರಾ ಸುತಾರಿಯಾ ನಡುವಿನ ನವಿರಾದ ಪ್ರೀತಿ, ರೊಮ್ಯಾಂಟಿಕ್ ಕ್ಷಣಗಳು ಮತ್ತು ಸ್ಟೈಲಿಷ್ ಲುಕ್ ಪ್ರಮುಖ ಆಕರ್ಷಣೆಯಾಗಿದೆ. ಮಾಂಟಾಜ್ ಶೈಲಿಯ ಡ್ಯುಯೆಟ್ ಗೀತೆಗೆ ಕನ್ನಡದ ಖ್ಯಾತ ಗೀತರಚನೆಕಾರ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ತನಿಷ್ಕ್ ಬಾಗ್ಚಿ, ಫಹೀನ್ ಅಬ್ದುಲ್ಲಾ ಮತ್ತು ಅರ್ಸ್ಲಾಂ ನಿಝಾಮಿ ಸಂಗೀತ ಸಂಯೋಜಿಸಿದ್ದಾರೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಹಾಡು ಬಿಡುಗಡೆಯಾಗಿದೆ.

ಈಗಾಗಲೇ ಬಿಡುಗಡೆಯಾದ ‘ತಬಾಹಿ’ ಸೇರಿದಂತೆ ಚಿತ್ರದ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೂ ಮೂರು ವಿಶೇಷ ಹಾಡುಗಳನ್ನು ಚಿತ್ರತಂಡ ಬಿಡುಗಡೆಗೆ ಕಾಯ್ದಿರಿಸಿದೆ. ಸಿನಿಮಾ ತೆರೆಗೆ ಬರುವ ಮುನ್ನ ಹಂತ ಹಂತವಾಗಿ ಅವುಗಳನ್ನು ಅನಾವರಣಗೊಳಿಸುವ ಯೋಜನೆ ಚಿತ್ರತಂಡದ್ದಾಗಿದೆ.

ಯಶ್ ಅವರ ಸಹೋದರಿ ಪಾತ್ರದಲ್ಲಿ ನಟಿಸಿರುವ ನಯನತಾರಾ ಹಾಗೂ ಪ್ರೇಯಸಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕಿಯಾರಾ ಅಡ್ವಾಣಿ ಅವರ ಝಲಕ್‌ಗಳು ಹಾಡಿನ ಮೇಲಿನ ಕುತೂಹಲವನ್ನು  ಹೆಚ್ಚಿಸಿವೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!