ವೈರಲ್ ಆದ ‘ಟಾಕ್ಸಿಕ್’ ಹೊಸ ಪೋಸ್ಟರ್‌

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಹೊಸ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೆರೂನ್ ಬಣ್ಣದ ಜಾಕೆಟ್ ಧರಿಸಿರುವ ಯಶ್, ರಕ್ತಸಿಕ್ತ ಬೆರಳುಗಳೊಂದಿಗೆ ಸಿಗರೇಟಿಗೆ ಬೆಂಕಿ ಹಚ್ಚುತ್ತಾ ಗೆಲುವಿನ ನಗೆ ಬೀರುವ ಸ್ಟೈಲಿಶ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಪೋಸ್ಟರ್   ಹೊಸ ಸಂಚಲನ ಸೃಷ್ಟಿಸಿದೆ.

ಚಿತ್ರದಲ್ಲಿ ಯಶ್ ಅವರು ‘ರಾಯ’ ಮತ್ತು ‘ಟಿಕೆಟ್’ ಎಂಬ ಎರಡು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ‘ರಾಯ’ ಪಾತ್ರದ ಹೊಸ ಪೋಸ್ಟರ್ ಅನಾವರಣಗೊಂಡಿದೆ. ಈ ಹಿಂದೆ ಎರಡೂ ಪಾತ್ರಗಳ ಟೀಸರ್ ಬಿಡುಗಡೆಯಾಗಿವೆ.

ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿರುವ ‘ಟಾಕ್ಸಿಕ್’ ಚಿತ್ರದ ಟೀಸರ್ ಹಾಗೂ  ಹಾಡುಗಳು ಈಗಾಗಲೇ ಭರ್ಜರಿ ಸದ್ದು ಮಾಡಿವೆ. ಟೀಸರ್‌ನಲ್ಲಿ ಯಶ್ ಅವರ ಮಾಸ್ ಎಂಟ್ರಿ, ರಕ್ತಪಾತ, ಭರ್ಜರಿ ಆಕ್ಷನ್ ದೃಶ್ಯಗಳು ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿವೆ.

ಗೀತು ಮೋಹನ್ದಾಸ್ ನಿರ್ದೇಶನದ ಚಿತ್ರದಲ್ಲಿ ಯಶ್ ಜೊತೆಗೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಹಾಗೂ ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರವಿ ಬಸ್ರೂರು ಸಂಗೀತ ನೀಡಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!