ರಾಕಿಂಗ್ ಸ್ಟಾರ್ ಯಶ್, ತಮ್ಮ ಮುಂದಿನ ಚಿತ್ರ ಟಾಕ್ಸಿಕ್‌ನ ಜಾಗತಿಕ ಬಿಡುಗಡೆಗಾಗಿ 20 ಸೆಂಚುರಿ ಫಾಕ್ಸ್‌ನೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
ಟಾಕ್ಸಿಕ್‌ನ ಕಥೆ ಮತ್ತು ದೃಶ್ಯಗಳು ಹಾಲಿವುಡ್ ಚಿತ್ರಗಳಿಗೆ ಸರಿಯಾಗಿವೆ ಎಂದು ಯಶ್ ಬಲವಾಗಿ ನಂಬಿದ್ದಾರೆ. ದೊಡ್ಡ ಮಟ್ಟದಲ್ಲಿ ಚಿತ್ರ ಬಿಡುಗಡೆಗಾಗಿ ಜಾಗತಿಕ ದೈತ್ಯರೊಂದಿಗೆ ಪಾಲುದಾರಿಕೆಯ ಸಾಧ್ಯತೆಗಳನ್ನು ಅನ್ವೇಷಿಸುತ್ತಿದ್ದಾರೆ. KVN ಪ್ರೊಡಕ್ಷನ್ಸ್‌ನಲ್ಲಿ ಸಹ ಪಾಲುದಾರರಾಗಿರುವ ಯಶ್ ಟಾಕ್ಸಿಕ್ ನ್ನು ಜಾಗತಿಕವಾಗಿ ಬಿಡುಗಡೆ ಮಾಡಲು ಆಶಿಸುತ್ತಿದ್ದಾರೆ. ಮೂಲಗಳ ಪ್ರಕಾರ ಚರ್ಚೆ ಅತ್ಯಂತ ಆರಂಭಿಕ ಹಂತಗಳಲ್ಲಿವೆ.
ಟಾಕ್ಸಿಕ್ ಚಿತ್ರವನ್ನು ತಯಾರಕರು 2025ರ ಡಿಸೆಂಬರ್ ನಲ್ಲಿ ಬಿಡುಗಡೆ ಮಾಡುವ ಉದ್ದೇಶ ಹೊಂದಿದ್ದಾರೆ. ಬಿಡುಗಡೆ ದಿನಾಂಕವನ್ನು ಇನ್ನೂ ಘೋಷಣೆಯಾಗಿಲ್ಲ. ಶೂಟಿಂಗ್ ಶೆಡ್ಯೂಲ್ ಮುಗಿಯುತ್ತಿದ್ದಂತೆ ಬಿಡುಗಡೆ ನಿರ್ಧಾರ ಕೈಗೊಳ್ಳಲಾಗುತ್ತದೆ.
ಟಾಕ್ಸಿಕ್ ಚಿತ್ರ 2025ರ ಬಹು ನಿರೀಕ್ಷಿತ ಬಿಡುಗಡೆಗಳಲ್ಲಿ ಒಂದಾಗಿದೆ. ಈ ಚಿತ್ರದಲ್ಲಿ ಯಶ್ ಹಿಂದೆಂದೂ ನೋಡಿರದ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕಿ ಗೀತು ಮೋಹನ್‌ದಾಸ್ ಟಾಕ್ಸಿಕ್ ನಿರ್ದೇಶನ ಮಾಡುತ್ತಿದ್ದಾರೆ. ಇದರಲ್ಲಿ ಕಿಯಾರಾ ಅಡ್ವಾಣಿ ಮತ್ತು ನಯನತಾರಾ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
Be the first to comment