ಗೋವಾದಲ್ಲಿʻಟಾಕ್ಸಿಕ್ʼ ಶೂಟಿಂಗ್‌

ರಾಕಿಂಗ್ ಸ್ಟಾರ್ ಯಶ್‌ ಅಭಿನಯದ ʻಟಾಕ್ಸಿಕ್ʼ ಚಿತ್ರದ ಶೂಟಿಂಗ್‌ ಗೋವಾದಲ್ಲಿ ನಡೆಯುತ್ತಿದ್ದು, ಕೆಲವು ಫೋಟೊ ಹಾಗೂ ವಿಡಿಯೊಗಳು ಲೀಕ್‌ ಆಗಿವೆ.

ವೈರಲ್ ಆದ ಫೋಟೊದಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಕೆಲವು ವರದಿಗಳ ಪ್ರಕಾರ ಇದು ಶೂಟಿಂಗ್‌ ವಿಡಿಯೊ ಅಲ್ಲ ಎನ್ನಲಾಗಿದೆ.

ಮಲಯಾಳ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್ ದಾಸ್ ಈ ಸಿನಿಮಾಗೆ ಆಯಕ್ಷನ್ ಕಟ್ ಹೇಳುತ್ತಿದ್ದು, ಡ್ರಗ್ ಮಾಫಿಯಾದ ಸುತ್ತಾ ಚಿತ್ರದ ಕಥೆ ಹೆಣೆಯಲಾಗಿದೆ. 2025 ರಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತೆರೆಗೆ ಬರಲಿದೆ.

ಕಥೆಗೆ ಬಹು ಮುಖ್ಯ ತಿರುವು ನೀಡುವ ಪಾತ್ರದಲ್ಲಿ ಕರೀನಾ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಯಶ್‌ ಬಾಲಿವುಡ್‌ ಕಲಾವಿದರ ಜತೆ ತೆರೆ ಹಂಚಿಕೊಂಡಿದ್ದಾರೆ. ಪ್ರಶಾಂತ್‌ ನೀಲ್‌ ನಿರ್ದೇಶನದ ʼಕೆಜಿಎಫ್‌ 2ʼ ಚಿತ್ರದಲ್ಲಿ ಬಾಲಿವುಡ್‌ ತಾರೆಯರಾದ ಸಂಜಯ್‌ ದತ್‌ ಮತ್ತು ರವೀನಾ ಟಂಡನ್‌ ಕಾಣಿಸಿಕೊಂಡಿದ್ದರು.

ಕೆವಿಎನ್ ಪ್ರೊಡಕ್ಷನ್ಸ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ʼಟಾಕ್ಸಿಕ್‌ʼ ಚಿತ್ರವನ್ನು ನಿರ್ಮಿಸಲಿದ್ದಾರೆ. ಪ್ರಮುಖ ಪಾತ್ರದಲ್ಲಿ ಯಾರೆಲ್ಲ ನಟಿಸುತ್ತಿದ್ದಾರೆ ಎನ್ನುವ ವಿಚಾರವನ್ನು ಚಿತ್ರತಂಡ ಇದುವರೆಗೆ ಬಹಿರಂಗಪಡಿಸಿಲ್ಲ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!