ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಚಿತ್ರೀಕರಣ ಉದ್ಯಾನ ನಗರಿ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದೆ.
ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ, ನಯನತಾರಾ, ತಾರಾ ಸುತಾರಿಯಾ, ಹುಮಾ ಖುರೇಷಿ ಬೆಂಗಳೂರಿನಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ಎಲ್ಲರೂ ತಮ್ಮ ಕೆಲ ಭಾಗಗಳನ್ನು ಚಿತ್ರೀಕರಣ ನಡೆಸಿದ್ದು, ಇದೀಗ ಒಟ್ಟಾಗಿ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಚಿತ್ರಕ್ಕೆ ಮಲಯಾಳಂನ ಗೀತು ಮೋಹನ್ದಾಸ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಮುಂಬೈ ಮತ್ತು ಗೋವಾದಲ್ಲಿ ಚಿತ್ರೀಕರಣ ಪೂರೈಸಿದ ನಂತರ ಚಿತ್ರತಂಡ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭಿಸಿದೆ. ಬಹು ತಾರಾಗಣವನ್ನು ಹೊಂದಿರುವ ಟಾಕ್ಸಿಕ್ ಚಿತ್ರದ ಚಿತ್ರೀಕರಣ ಕ್ಷಿಪ್ರಗತಿಯಲ್ಲಿ ಸಾಗುತ್ತಿದೆ.
ಬ್ರಿಟಿಷ್ ನಟರಾದ ಡ್ಯಾರೆಲ್ ಡಿ’ಸಿಲ್ವಾ ಮತ್ತು ಬೆನೆಡಿಕ್ಟ್ ಗ್ಯಾರೆಟ್ ಅವರು ಟಾಕ್ಸಿಕ್ನಲ್ಲಿ ನಟಿಸುತ್ತಿದ್ದು, ಇದು ಚಿತ್ರಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಆಕರ್ಷಣೆ ಹೆಚ್ಚಿಸಿದೆ. ಚಿತ್ರಕ್ಕೆ ರಾಜೀವ್ ರವಿ ಛಾಯಾಗ್ರಹಣ ಮಾಡಿದ್ದಾರೆ. ರವಿ ಬಸ್ರೂರ್ ಅವರ ಸಂಗೀತ ಸಂಯೋಜನೆಯಿದೆ. ಯಶ್ ಹುಟ್ಟುಹಬ್ಬದಂದು ಬಿಡುಗಡೆಯಾದ ವಿಶೇಷ ಟೈಟಲ್ ಟೀಸರ್ ಅನ್ನು ಜೆರೆಮಿ ಸ್ಟಾಕ್ ನಿರ್ದೇಶಿಸಿದ್ದಾರೆ.
ಬಹು ಭಾಷೆಗಳಲ್ಲಿ ತಯಾರಾಗುತ್ತಿರುವ ಟಾಕ್ಸಿಕ್ ಚಿತ್ರವನ್ನು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಜೊತೆಗೆ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿದೆ.
Be the first to comment