ಫೆ. 20ರಂದು ‘ಟಾಕ್ಸಿಕ್’ ಮತ್ತೊಂದು ಟೀಸರ್ ಬಿಡುಗಡೆ

ಯಶ್ ನಟನೆಯ  ‘ಟಾಕ್ಸಿಕ್’ ಸಿನಿಮಾದ ಮತ್ತೊಂದು ಟೀಸರ್ ಫೆ. 20ರಂದು ಬಿಡುಗಡೆಯಾಗಲಿದೆ.

ಈ ಬಗ್ಗೆ ‘ಟಾಕ್ಸಿಕ್’ ಚಿತ್ರದ ನಿರ್ದೇಶಕಿ ಗೀತು ಮೋಹನ್ ದಾಸ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನಾಳೆ ಬೆಳಿಗ್ಗೆ 9:35ಕ್ಕೆ ಟಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ’ ಎಂದು ಬರೆದುಕೊಂಡಿದ್ದಾರೆ.

‘ಟಾಕ್ಸಿಕ್’ ಸಿನಿಮಾದ ಟೀಸರ್ ಜ.8ರಂದು ಬಿಡುಗಡೆಯಾದ ಬಳಿಕ ಆಕ್ಷೇಪಾರ್ಹ ದೃಶ್ಯ ಹೊಂದಿದೆ ಎಂದು ಸಾಮಾಜಿಕ ವಲಯದಲ್ಲಿ ವ್ಯಾಪಕವಾಗಿ ಚರ್ಚೆಗೆ ಒಳಗಾಗಿತ್ತು. 2.51 ನಿಮಿಷಗಳ ವಿಡಿಯೊ ವೀಕ್ಷಿಸಿದ ಅಭಿಮಾನಿಗಳು ದಂಗಾಗಿದ್ದರು. ಮೊದಲ ಬಾರಿಗೆ ಹಿಂದೆಂದೂ ಕಾಣಿಸದ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಂಡಿದ್ದರು.

ಸಿನಿಮಾದ ಮತ್ತೊಂದು ಟೀಸರ್ ನಾಳೆ ಬೆಳಿಗ್ಗೆ ಬಿಡುಗಡೆಯಾಗಲಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ನಾಯಕ ನಟನಾಗಿ ಅಭಿನಯಿಸಿದ್ದು, ಗೀತು ಮೋಹನ್​ದಾಸ್ ಅವರು ಸಿನಿಮಾನ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಶಿ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.  ಮಾರ್ಚ್ 19ರಂದು ಟಾಕ್ಸಿಕ್ ಸಿನಿಮಾ ಬಿಡುಗಡೆಯಾಗುತ್ತಿದೆ. ರೆಟ್ರೋ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ.

Gourish Akki

Be the first to comment

Leave a Reply

Your email address will not be published. Required fields are marked *

Translate »
error: Content is protected !!