ಆ.8ಕ್ಕೆ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟ್ರೇಲರ್ ನ್ನು ಆಗಸ್ಟ್ 8 ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಲಾಂಚ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಚಿತ್ರತಂಡ  ಯಶ್ ಅವರ ಖಡಕ್ ಲುಕ್ ಇರುವ ಹೊಸ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ಇದರ ಜೊತೆಗೆ ಬಹುನಿರೀಕ್ಷಿತ ಟ್ರೇಲರ್ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ.

‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಹೊಸ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಇದರಲ್ಲಿ ಯಶ್ ನಿರ್ವಹಿಸುತ್ತಿರುವ ‘ರಾಯಾ’ ಪಾತ್ರದ  ಕೈಯಲ್ಲಿ ಟಾಮಿ ಗನ್ ಇರುವುದು ಚಿತ್ರದ ಮೇಲಿನ ಕುತೂಹಲವನ್ನು  ಹೆಚ್ಚಿಸಿದೆ.

ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಸಿನಿಮಾದ ಟ್ರೇಲರ್ ಲಾಂಚ್ ಮಾಡಲಾಗುತ್ತಿದೆ. ಆಗಸ್ಟ್ 8 ರಂದು ಈ ಚಿತ್ರದ ಶೂಟಿಂಗ್ ಆರಂಭವಾಗಿ ಭರ್ತಿ ಎರಡು ವರ್ಷಗಳು ಪೂರೈಸಲಿವೆ. ಚಿತ್ರದ  ಪ್ರಚಾರ ಕಾರ್ಯಗಳು ಬೆಂಗಳೂರಿನಿಂದಲೇ ಆರಂಭವಾಗಲಿವೆ.

ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರ  ಈ ವರ್ಷದ  ಬಿಗ್ ಬಜೆಟ್ ಸಿನಿಮಾಗಳಲ್ಲೊಂದಾಗಿದೆ. ಚಿತ್ರದ ಅದ್ಭುತ ಮೇಕಿಂಗ್ ನೋಡಲು ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಆಗಸ್ಟ್ 26ರಂದು ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ಚಿತ್ರವನ್ನು ನಿರ್ಮಿಸಿವೆ.

‘ಟಾಕ್ಸಿಕ್ ಚಿತ್ರದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್,  ಹುಮಾ ಖುರೇಷಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ.  ಜೊತೆಗೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಿಗೂ ಡಬ್ ಮಾಡಿ ರಿಲೀಸ್ ಮಾಡಲಾಗುತ್ತಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!