ಕೆಜಿಎಫ್ ಚಿತ್ರೀಕರಣವಾದ ಗುಡ್ಡದಲ್ಲಿ ಅರಣ್ಯೀಕರಣ

ಕೆಜಿಎಫ್ 2 ಸಿನಿಮಾದ ಚಿತ್ರೀಕರಣ ನಡೆದ ಕೋಲಾರದ ಕೆಜಿಎಫ್‌ ಸೈನೈಡ್ ಗುಡ್ಡದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ ವತಿಯಿಂದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಈ ಬಗ್ಗೆ ಯುಟ್ಯೂಬ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಹೊಂಬಾಳೆ ಫಿಲಂಸ್ ಸಂಸ್ಥೆ, ಅರಣ್ಯ ಇಲಾಖೆಯ ಜೊತೆಗೂಡಿ ಸಾವಿರಾರು ಗಿಡಗಳನ್ನು ನೆಡುವ ಮೂಲಕ ಸೈನೈಡ್ ಗುಡ್ಡದ ಬಂಜರು ಭೂಮಿಗೆ ಮರುಜೀವ ನೀಡಲಾಗುತ್ತಿದೆ. ಅರಣ್ಯ ಬೆಳೆಸುವ ಮೂಲಕ ಸ್ಥಳೀಯ ನಿವಾಸಿಗಳಿಗೆ ಸ್ವಚ್ಛ ಪರಿಸರದ ಕೊಡುಗೆ ನೀಡುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದೆ.

ಈ ವಿಡಿಯೋ ನೋಡಿರುವ ಯಶ್‌ ಅಭಿಮಾನಿಗಳು ಹೊಂಬಾಳೆ ಫಿಲಂಸ್ ಸಂಸ್ಥೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಶಾಂತ್‌ ನೀಲ್‌ ನಿರ್ದೇಶನದ ಕೆಜಿಎಫ್‌ ಚಿತ್ರ ಕನ್ನಡ, ತೆಲುಗು, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತ್ತು. ಈಗ ಬಿಡುಗಡೆಗೆ ಸಿದ್ಧವಾಗಿರುವ ಕೆಜಿಎಫ್ -2 ಚಿತ್ರ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ನಟ ಯಶ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕೆಜಿಎಫ್ 2 ಚಿತ್ರವನ್ನು 2022ರ ಏಪ್ರಿಲ್ 14 ರಂದು ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಈಗಾಗಲೇ ಘೋಷಣೆ ಮಾಡಿದೆ. ಯಶ್ ಜೊತೆಗೆ ರವೀನಾ ಟಂಡನ್, ಸಂಜಯ್ ದತ್ ಸೇರಿದಂತೆ ಘಟಾನುಘಟಿ ನಟರು ನಟಿಸಿದ್ದಾರೆ. ಚಿತ್ರದ ಪೋಸ್ಟರ್ ಗಳು ಈಗಾಗಲೇ ಅಭಿಮಾನಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿವೆ.

 

Be the first to comment

Leave a Reply

Your email address will not be published. Required fields are marked *

Translate »
error: Content is protected !!