ನಾಳೆ ʼತ್ರಿಬ್ಬಲ್ ರೈಡಿಂಗ್ʼ ತೆರೆಗೆ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ʼತ್ರಿಬ್ಬಲ್ ರೈಡಿಂಗ್ʼ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ.

ರೋಮ್ಯಾಂಟಿಕ್ ಆಕ್ಷನ್ ಎಂಟರ್ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಗಣೇಶ್ ಗೆ ಜೋಡಿಯಾಗಿ ಅದಿತಿ ಪ್ರಭುದೇವ, ಮೇಘ ಶೆಟ್ಟಿ, ರಚನಾ ಇಂದರ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ಕೃಪಲು ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್ ನಡಿ ರಾಮ್ ಗೋಪಾಲ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಾಯ್ ಕಾರ್ತಿಕ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಸಾಧು ಕೋಕಿಲ, ರವಿಶಂಕರ್, ಕುರಿ ಪ್ರತಾಪ್, ರಂಗಾಯಣ ರಘು, ಶರತ್ ಲೋಹಿತಾಶ್ವ, ಶೋಭರಾಜ್ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಗಾಳಿಪಟ 2 ಚಿತ್ರದ ನಂತರ ಗಣೇಶ್ ಅಭಿನಯದ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಪ್ರೇಕ್ಷಕರು ಚಿತ್ರಕ್ಕೆ ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದು ನಾಳೆ ಗೊತ್ತಾಗಲಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!