Dr.ಮೊಮ್ಮಗಳ ಚೊಚ್ಚಲ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಫಿದಾ

ವರನಟ ಡಾ. ರಾಜ್​​​​​​ಕುಮಾರ್ ಮೊಮ್ಮಗಳು ಧನ್ಯಾರಾಮ್​​​ ಕುಮಾರ್ ಅಭಿನಯಿಸಿರುವ ಚೊಚ್ಚಲ ಚಿತ್ರ ‘ನಿನ್ನ ಸನಿಹಕೆ’ ಟೀಸರ್ ಮತ್ತು ಹಾಡುಗಳಿಂದಲೇ ಸಖತ್ ಸೌಂಡ್​ ಮಾಡುತ್ತಿದೆ. ಇದೀಗ ಈ ಸಿನಿಮಾ ಸೆನ್ಸಾರ್​ನಲ್ಲಿ ಯು/ಎ ಸರ್ಟಿಫಿಕೆಟ್ ಪಡೆಯುವ ಮೂಲಕ ಪ್ರಶಂಸೆ ಪಡೆದುಕೊಂಡಿದೆ.

ಮದುವೆಯ ಮಮತೆಯ ಕರೆಯೋಲೆ ಚಿತ್ರದ ಮೂಲಕ ಸ್ಯಾಂಡಲ್​ವುಡ್​ನಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವ ನಟ ಸೂರಜ್ ಗೌಡ ನಿರ್ದೇಶನದ ‘ನಿನ್ನ ಸನಿಹಕೆ’ ಚಿತ್ರ ಗಾಂಧಿನಗರದಲ್ಲಿ ಹೊಸ ಭರವಸೆ ಮೂಡಿಸಿದೆ. ಇದೊಂದು ರೊಮ್ಯಾಂಟಿಕ್ ಚಿತ್ರವಾಗಿದ್ದು, ರಾಜ್​​​​​​ಕುಮಾರ್ ಮೊಮ್ಮಗಳು ಧನ್ಯಾರಾಮ್​​​ ಕುಮಾರ್ ಈ ಚಿತ್ರದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ವೈಟ್ ಆ್ಯಂಡ್ ಗ್ರೇ ಪಿಕ್ಚರ್ಸ್ ಬ್ಯಾನರ್ ಅಡಿ ಅಕ್ಷಯ್ ರಾಜಶೇಖರ್, ರಂಗನಾಥ್ ಕುಡ್ಲಿ ನಿರ್ಮಿಸಿದ್ದಾರೆ. ಸದ್ಯ ಈ ಲಿರಿಕಲ್ ವಿಡಿಯೋದಿಂದ ಸದ್ದು ಮಾಡ್ತಿರುವ ನಿನ್ನ ಸನಿಹಕೆ‌ ತಂಡ ಇಷ್ಟರಲ್ಲೇ ಟ್ರೈಲರ್ ರಿಲೀಸ್ ಮಾಡೋ‌ ಪ್ಲಾನ್​ನಲ್ಲಿದೆ. ಬ್ಯಾಕ್ ಟು ಬ್ಯಾಕ್ ಬಹುಭಾಷೆಯಲ್ಲಿ ಕನ್ನಡ ಸಿನಿಮಾಗಳು ಬರುತ್ತಿರುವ‌ ಹೊತ್ತಲ್ಲಿ, ಕನ್ನಡದಲ್ಲಿ ಮಾತ್ರ ಬಿಡುಗಡೆ ಅನ್ನೋ ಟ್ಯಾಗ್ ಲೈನ್​ನೊಂದಿಗೆ ನಿನ್ನ‌ಸನಿಹಕೆ‌ ಸಿನಿಮಾ ತಂಡ ಏಪ್ರಿಲ್ 16ಕ್ಕೆ ಪ್ರೇಕ್ಷಕರೆದುರಿಗೆ ಬರ್ತಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!