ಬಿಗ್ ಬಾಸ್ ಕನ್ನಡ 11ನೇ ಸೀಸನ್ ಸ್ಪರ್ಧಿ, ನಟ ಉಗ್ರಂ ಮಂಜು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಉಗ್ರಂ ಮಂಜು ಅವರು ಸಂಧ್ಯಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥ ಕಾರ್ಯಕ್ರಮ ಆತ್ಮೀಯರು, ಸ್ನೇಹಿತರ ಸಮ್ಮುಖದಲ್ಲಿ ನೆರವೇರಿದೆ. ಜನವರಿಯಲ್ಲಿ ಮದುವೆ ನಡೆಯಲಿದೆ ಎಂದು ಹೇಳಲಾಗಿದೆ.
ಈ ವಿಚಾರವನ್ನು ಉಗ್ರಂ ಮಂಜು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರು ಉಂಗುರ ಬದಲಿಸಿಕೊಳ್ಳುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.
‘ಬದುಕಿನ ಹೊಸ ಅಧ್ಯಾಯ ಆರಂಭವಾಗಿದೆ… ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ. ದೇವರ ಕೃಪೆಯಿಂದ, ಕುಟುಂಬದ ಆಶೀರ್ವಾದದಿಂದ… ನಾವು ಜೀವನದ ಹೊಸ ಹಾದಿಗೆ ಕಾಲಿಟ್ಟಿದ್ದೇವೆ. ಹೊಸ ಬಂಧದ ಆರಂಭ… ನಿಶ್ಚಿತಾರ್ಥದ ಸುಂದರ ಕ್ಷಣ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇವೆ’ ಎಂದು ಬರೆದಿದ್ದಾರೆ.
ಇಷ್ಟು ದಿನ ಉಗ್ರಂ ಮಂಜು ಅವರ ಮದುವೆ ಯಾವಾಗ ಎನ್ನುತ್ತಿದ್ದವರಿಗೆ ಉತ್ತರ ಸಿಕ್ಕಂತಾಗಿದೆ. ದೀರ್ಘಕಾಲದಿಂದ ಮದುವೆ ಆಗದ ನಟ ಎಂದು ಗೆಳೆಯರಿಂದ ತಮಾಷೆ ಕೇಳುತ್ತಿದ್ದ ಮಂಜು ತಮ್ಮ ಜೀವನ ಸಂಗಾತಿಯನ್ನು ಹುಡುಕಿಕೊಂಡಿದ್ದಾರೆ.
ಸಂಧ್ಯಾ ಅವರು ಸ್ಪರ್ಶ್ ಆಸ್ಪತ್ರೆಯಲ್ಲಿ ಟ್ರಾನ್ಸ್ಪ್ಲಾಂಟ್ ಕೋಆರ್ಡಿನೇಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಉಗ್ರಂ ಮಂಜುಗೆ ಅಭಿನಂದನೆ ತಿಳಿಸಿದ್ದಾರೆ.
—-





Be the first to comment