ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದೆ. 2 ದಿನದಲ್ಲಿ 37 ಕೋಟಿ ರೂ. ಬಾಚಿದೆ.
ಶುಕ್ರವಾರ ಮೊದಲ ದಿನ 18 ಕೋಟಿ ರೂ., ಶನಿವಾರ 2ನೇ ದಿನ 19 ಕೋಟಿ ರೂ. ಗಳಿಸಿದೆ. ಶನಿವಾರ ಕರ್ನಾಟಕದಲ್ಲಿ 10 ಕೋಟಿ ರೂ. , ಆಂಧ್ರ ಮತ್ತು ತೆಲಂಗಾಣದಲ್ಲಿ 4ಕೋಟಿ ರೂ., ಉತ್ತರ ಭಾರತದಲ್ಲಿ 1.5 ಕೋಟಿ ರೂ. ಗಳಿಸಿದೆ. ಬಹುತೇಕ ಕಡೆ ಯುಐ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ.
UI’ ಚಿತ್ರದಲ್ಲಿ ಉಪೇಂದ್ರ ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕೆ.ವಿ.ಎನ್.ಪ್ರೊಡಕ್ಷನ್ಸ್ ವಿತರಣೆಯ ಜವಾಬ್ದಾರಿ ಹೊತ್ತುಕೊಂಡಿದೆ.
ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ‘UI’ ಚಿತ್ರವನ್ನು ನಿರ್ಮಿಸಿದ್ದಾರೆ. ನವೀನ್ ಮನೋಹರ್ ಸಹ ನಿರ್ಮಾಣವಿದೆ. ತುಳಸಿರಾಮ ನಾಯ್ಡು (ಲಹರಿ ವೇಲು), ಜಿ.ರಮೇಶ್, ಜಿ.ಆನಂದ್ ಚಂದ್ರು ಮನೋಹನ್ ಹಾಗೂ ನಾಗೇಂದ್ರ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.
9 ವರ್ಷಗಳ ನಂತರ ಉಪೇಂದ್ರ ನಿರ್ದೇಶನದಲ್ಲಿ ಬರುತ್ತಿರುವ ಚಿತ್ರ ‘ಯುಐ’ ಕ್ರೇಜ್ ಹೆಚ್ಚಿದೆ. ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ವಿಶ್ವದಾದ್ಯಂತ UI ಬಿಡುಗಡೆ ಆಗಿದೆ.
—-
Be the first to comment