ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ ‘UI’ ಚಿತ್ರ ನಾಳೆ (ಡಿ.20) ವಿಶ್ವದಾದ್ಯಂತ 4,000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಲಿದೆ.
ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. 9 ವರ್ಷಗಳ ನಂತರ ಉಪೇಂದ್ರ ನಿರ್ದೇಶನದಲ್ಲಿ ಬರುತ್ತಿರುವ ಈ ಚಿತ್ರದ ಮೊದಲ ಪ್ರದರ್ಶನ ಡಿಸೆಂಬರ್ 20 ರ ಬೆಳಿಗ್ಗೆ 6 ಗಂಟೆಯಿಂದ ಪ್ರಾರಂಭವಾಗಲಿದೆ. ಚಿತ್ರಕ್ಕೆ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಬಹುತೇಕ ಫುಲ್ ಆಗಿದೆ.
ಯುಐ’ ಚಿತ್ರದ ಇಡೀ ಚಿತ್ರೀಕರಣವನ್ನು ಕತ್ತಲೆಯಲ್ಲಿ ಮಾಡಿರುವುದು ವಿಶೇಷ. ‘ಯುಐ’ ಚಿತ್ರದಲ್ಲಿ‘ನೈಟ್ ಫಾರ್ ಡೇ’ ಕಾನ್ಸೆಪ್ಟ್ ಬಳಸಲಾಗಿದೆ. ‘ನೈಟ್ ಫಾರ್ ಡೇ’ ಪ್ರಯೋಗ ಮಾಡಿರುವುದು ಸ್ಯಾಂಡಲ್ವುಡ್ನಲ್ಲಿ ಇದೇ ಮೊದಲಾಗಿದೆ.
ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ‘UI’ ಚಿತ್ರವನ್ನು ನಿರ್ಮಿಸಿದ್ದಾರೆ. ನವೀನ್ ಮನೋಹರ್ ಸಹ ನಿರ್ಮಾಣವಿದೆ. ತುಳಸಿರಾಮ ನಾಯ್ಡು (ಲಹರಿ ವೇಲು), ಜಿ.ರಮೇಶ್, ಜಿ.ಆನಂದ್ ಚಂದ್ರು ಮನೋಹನ್ ಹಾಗೂ ನಾಗೇಂದ್ರ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.
‘UI’ ಚಿತ್ರದಲ್ಲಿ ಉಪೇಂದ್ರ ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕೆ.ವಿ.ಎನ್.ಪ್ರೊಡಕ್ಷನ್ಸ್ ವಿತರಣೆಯ ಜವಾಬ್ದಾರಿ ಹೊತ್ತುಕೊಂಡಿದೆ.






Be the first to comment