ʼಕೂಲಿʼಗೆ ರಿಯಲ್ ಸ್ಟಾರ್ ಎಂಟ್ರಿ!

ನಿರ್ದೇಶಕ ಲೋಕೇಶ್ ಕನಕರಾಜ್ ಅವರ ‘ಕೂಲಿ’ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಇದುವರೆಗೂ ‘ಕೂಲಿ’ ಚಿತ್ರದಲ್ಲಿ ಉಪ್ಪಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಇತ್ತು. ಇದೀಗ ಈ ಚಿತ್ರಕ್ಕೆ ಸಂಬಂಧಿಸಿದ  ಅಧಿಕೃತವಾಗಿ ಘೋಷಣೆಯಾಗಿದ್ದು, ಉಪೇಂದ್ರ ಪೋಸ್ಟರ್‌ ಕೂಡ ಬಿಡುಗಡೆಯಾಗಿದೆ.

ಪೋಸ್ಟರ್‌ನಲ್ಲಿ ಉಪೇಂದ್ರ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಚಿತ್ರದ ಹೈಪ್  ಹೆಚ್ಚಿಸಿದೆ. ಉಪ್ಪಿ ತಮ್ಮ ಸಿನಿಮಾ ಜೀವನದಲ್ಲಿ ಮೊದಲ ಬಾರಿಗೆ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಉಪ್ಪಿಯ ಈ ಲುಕ್ ನೋಡಿದ್ರೆ ರಜನಿಕಾಂತ್ ಗೆ ಉಪೇಂದ್ರ  ವಿಲನ್‌ ಆಗ್ತಾರಾ ಎನ್ನುವ ಸಂಶಯ ಮೂಡಿದೆ.

ಕೂಲಿ ಚಿತ್ರದಲ್ಲಿ ನಾಯಕಿಯಾಗಿ ಶ್ರುತಿ ಹಾಸನ್ ಮತ್ತು ಮಹೇಂದ್ರನ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಮೊದಲು ‘ತಲೈವಾ 171 ‘ ಶೀರ್ಷಿಕೆ ಇಡಲಾಗಿತ್ತು. ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ತಮಿಳಿನ ಜೊತೆಗೆ ತೆಲುಗಿನಲ್ಲೂ ಬಿಡುಗಡೆಯಾಗಲಿದೆ.

ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ, ಗಿರೀಶ್ ಗಂಗಾಧರನ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ.  ರಿಯಲ್ ಸ್ಟಾರ್ ಉಪೇಂದ್ರ ಯುಐ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ರಿಯಲ್ ಸ್ಟಾರ್

Be the first to comment

Leave a Reply

Your email address will not be published. Required fields are marked *

Translate »
error: Content is protected !!