Buddhivantha 2 : ಸೆ.15ಕ್ಕೆ ಉಪೇಂದ್ರ ಅಭಿನಯದ “ಬುದ್ದಿವಂತ- 2”ಬಿಡುಗಡೆ.

 ರಿಯಲ್ ಸ್ಟಾರ್ ಸೂಪರ್ ಸ್ಟಾರ್ ಉಪೇಂದ್ರ ಅಭಿನಯದ ಬುದ್ಧಿವಂತ 2 ಚಿತ್ರ ಅಂತೂ ಇಂತೂ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ. ಈ ಚಿತ್ರವನ್ನು ಯುವ ನಿರ್ದೇಶಕ ಜಯದೇವ್ ನಿರ್ದೇಶನ ಮಾಡಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.‌

ವಿಡಿಯೋ ತುಣುಕೊಂದರ(ಗ್ಲಿಂಪ್ಸ್) ಮೂಲಕ ಚಿತ್ರತಂಡ “ಬುದ್ದಿವಂತ 2” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. “ಬುದ್ದಿವಂತ” ಎಂದೇ ಜನಪ್ರಿಯರಾಗಿರುವ ಉಪೇಂದ್ರ ಅವರ ಹುಟ್ಟುಹಬ್ಬ ಸೆಪ್ಟೆಂಬರ್ 18 ರಂದು. ಅವರ ಹುಟ್ಟುಹಬ್ಬದ ಸಮಯದಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳ ಸಂತಸ ಇಮ್ಮಡಿಯಾಗಲಿದೆ.

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಾ.ಟಿ.ಆರ್ ಚಂದ್ರಶೇಖರ್, ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ ಮತ್ತೊಂದು ಅದ್ದೂರಿ ಚಿತ್ರ “ಬುದ್ದಿವಂತ 2”. ಜೈದೇವ್ ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಉಪೇಂದ್ರ ಅವರಿಗೆ ನಾಯಕಿಯರಾಗಿ ಸೋನಾಲ್ ಮೊಂಟೆರೊ ಹಾಗೂ ಮೇಘನರಾಜ್ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಅವರು ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!