ಮಾಡೆಲ್ ಉರ್ಫಿ ಜಾವೇದ್ ಅವರನ್ನು ದುಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಸಾರ್ವಜನಿಕವಾಗಿ ಅಶ್ಲೀಲ ಉಡುಪು ಧರಿಸಿ ದುಬೈನಲ್ಲಿ ಚಿತ್ರೀಕರಣ ಮಾಡುತ್ತಿದ್ದಾಗ ಯುಎಇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಲು ಉರ್ಫಿ ನಿರಾಕರಿಸಿದ್ದಾರೆ. ದುಬೈನಲ್ಲಿ ಈ ರೀತಿಯ ಬಟ್ಟೆಗಳನ್ನು ಹಾಕಿಕೊಂಡು ಸಾರ್ವಜನಿಕವಾಗಿ ಚಿತ್ರೀಕರಣ ಮಾಡಲು ಅವಕಾಶವಿಲ್ಲದ ಕಾರಣ ಈ ರೀತಿ ಅವರು ಸಂಕಷ್ಟ ಎದುರಿಸಬೇಕಾಗಿದೆ. ಉರ್ಫಿ ಪೊಲೀಸರ ವಶದಲ್ಲಿ ಇದ್ದು, ಅಲ್ಲಿನ ಕಾನೂನಿಗೆ ತಲೆಬಾಗಬೇಕಾದ ಅನಿವಾರ್ಯತೆ ಸಿಕ್ಕಿಕಿದ್ದಾರೆ.
ನಿನ್ನೆ ಉರ್ಫಿ ಜಾವೇದ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿತ್ತು. ಆಸ್ಪತ್ರೆಯ ಬೆಡ್ ಮೇಲಿಂದಲೇ ತೆಗೆದ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಆ ವಿಡಿಯೋದಲ್ಲಿ ತಮಗಿರುವ ಸಮಸ್ಯೆ ಬಗ್ಗೆಯೂ ಅವರು ಹೇಳಿಕೊಂಡಿದ್ದರು. ಅದರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದರು. ದುಬೈನಲ್ಲೇ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ಉರ್ಫಿ ಜಾವೇದ್ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿವೆ. ಚಿತ್ರ ವಿಚಿತ್ರ ಬಟ್ಟೆ ಹಾಕುವ ಕಾರಣದಿಂದಾಗಿಯೇ ಅವರ ಮೇಲೆ ಹಲವರು ದೂರನ್ನು ನೀಡಿದ್ದಾರೆ. ಕೆಲ ಪ್ರಕರಣಗಳು ಅವರನ್ನು ಬೆನ್ನತ್ತಿ ಕಾಡುತ್ತಿವೆ. ಇವುಗಳಿಂದ ತಪ್ಪಿಸಿಕೊಳ್ಳಲು ಅವರು ಆಸ್ಪತ್ರೆಯ ನಾಟಕ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ.
____

Be the first to comment