ಉರಿಗೌಡ-ನಂಜೇಗೌಡ ಸಿನಿಮಾ ನಿರ್ಮಾಣ ಕೈಬಿಡಲಾಗಿದೆ ಎಂದು ನಿರ್ಮಾಪಕ ಮುನಿರತ್ನ ಹೇಳಿದ್ದಾರೆ.
ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಕಥೆಯಲ್ಲಿ ಸಾಕಷ್ಟು ಗೊಂದಲಗಳಿವೆ. ಇದು ವಿವಾದ ಆಗುತ್ತದೆ ಎಂದು ಗೊತ್ತಿರಲಿಲ್ಲ. ಈ ಚಿತ್ರವನ್ನು ಕೈ ಬಿಡಲಾಗಿದೆ. ಶ್ರೀಗಳು ಯಾರ ಮನಸಿಗೂ ನೋವು ಆಗಬಾರದು ಎಂದಿದ್ದಾರೆ. ಚಿತ್ರ ಮಾಡುವುದಿಲ್ಲ ಎಂದು ಶ್ರೀಗಳಿಗೆ ತಿಳಿಸಿದ್ದೇನೆ ಎಂದರು.
ಉರಿಗೌಡ- ನಂಜೇಗೌಡ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದ ನಿರ್ಮಾಪಕ ಮುನಿರತ್ನ ಅವರನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಸೋಮವಾರ ಭೇಟಿ ಆಗುವಂತೆ ಆಹ್ವಾನ ನೀಡಿದ್ದರು.
ಉರಿಗೌಡ ಮತ್ತು ನಂಜೇಗೌಡ ವಿಚಾರ ರಾಜಕೀಯವಾಗಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಮುನಿರತ್ನ ಅವರು ಹೆಸರನ್ನು ನೋಂದಣಿ ಮಾಡಿಸಿ, ಚಲನಚಿತ್ರ ಮಾಡುವುದಾಗಿ ಘೋಷಿಸಿದ್ದರು. ಅಲ್ಲದೇ ಮುಹೂರ್ತದ ದಿನಾಂಕವನ್ನೂ ನಿಗದಿ ಮಾಡಿದ್ದರು.
ಮುನಿರತ್ನ ಅವರ ನಡೆಯನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದರು.
ಈ ಚಿತ್ರ ನಿರ್ಮಾಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಪರ – ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು.
___

Be the first to comment