‘ಉತ್ತರಕಾಂಡ’ ಚಿತ್ರೀಕರಣ ಆರಂಭ

ಬಹುನಿರೀಕ್ಷಿತ ಕನ್ನಡ ಚಿತ್ರ  ‘ಉತ್ತರಕಾಂಡ’ ಚಿತ್ರೀಕರಣ ಏಪ್ರಿಲ್ 15ರಿಂದ ಆರಂಭಿಸಲಾಗಿದೆ.

15 ದಿನಗಳ ಶೂಟಿಂಗ್‌ ವಿಜಯಪುರದಲ್ಲಿ ಚಿತ್ರೀಕರಣಗೊಳ್ಳಲಿದೆ. ಸರ್ವ ಸಿದ್ಧತೆಗಳೊಂದಿಗೆ ಚಿತ್ರೀಕರಣ ಆರಂಭಗೊಂಡಿದ್ದು, ಚಿತ್ರ ತಂಡದವರು ಉತ್ಸುಕರಾಗಿದ್ದಾರೆ.

‘ಉತ್ತರಕಾಂಡ’ದ ಮುಹೂರ್ತ 2022ರಲ್ಲಿ‌ ಆಗಿದೆ. ಚಿತ್ರಕಥೆ ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಚಿತ್ರ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲಾನಿಂಗ್ ಅಗತ್ಯವಿತ್ತು. ಈ ಕಾರಣದಿಂದ ಚಿತ್ರೀಕರಣ ವಿಳಂಬಗೊಂಡಿತು.

ನಿರ್ದೇಶಕ ರೋಹಿತ್ ಪದಕಿ, ‘ಚಿತ್ರವನ್ನು ಆರಂಭಿಸಲು ನಾನು ಉತ್ಸಾಹಿಯಾಗಿದ್ದೇನೆ. ಈ ಚಿತ್ರಕ್ಕೆ ನಿಖರವಾದ ಪ್ಲಾನಿಂಗ್, ತಯಾರಿ ಮತ್ತು ಸಂಶೋಧನೆ ಅಗತ್ಯವಿತ್ತು. ನಾನು ಮತ್ತು ನಿರ್ಮಾಪಕರು ನಿದ್ದೆಗೆಟ್ಟು ಇದನ್ನು ಕಾರ್ಯರೂಪಕ್ಕೆ ತರವುದರಲ್ಲಿ ಶ್ರಮಿಸಿದ್ದೇವೆ. ಶಿವಣ್ಣ ಮತ್ತು ಧನಂಜಯ್ ಸೇರಿದಂತೆ ಬಹು ದೊಡ್ಡ ತಾರಾಗಣದ ಚಿತ್ರಕಥೆಯನ್ನು ಸಿನಿ ಪ್ರೇಕ್ಷಕರಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ಕುಂದು ಕೊರತೆ ಬರದಂತೆ ನಾನು ಮತ್ತು ಕೆ.ಆರ್.ಜಿ ಕೆಲಸ ಮಾಡಲಿದ್ದೇವೆ’ ಎಂದಿದ್ದಾರೆ.

ಚಿತ್ರವನ್ನು ಕೆ.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ನಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ನಿರ್ಮಿಸಲಿದ್ದಾರೆ. ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿದ್ದಾರೆ.  ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ (ಡಿಸೈನ್)ಮಾಡಲಿದ್ದಾರೆ. ಚಿತ್ರ ತಂಡ ತಾರಾಬಳಗವನ್ನು ಈ ವಾರ ಘೋಷಿಸಲಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!