Vairam ವೈರಂ ಟೀಸರ್ ರಿಲೀಸ್

ಹಿರಿಯ ನಟ ದೇವರಾಜ್ ಪುತ್ರ ಪ್ರಣಾಮ್ ದೇವರಾಜ್ ನಟನೆಯ ವೈರಂ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ನಟ ದೇವರಾಜ್, ಚಂದ್ರಕಲಾ ದೇವರಾಜ್, ರಾಗಿಣಿ ಪ್ರಜ್ವಲ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ದೇವರಾಜ್, ಕನ್ನಡ ಚಿತ್ರರಂಗ ಮತ್ತೆ ಬ್ಯುಸಿಯಾಗಿದೆ. ಈ ಸಮಯದಲ್ಲಿ ನನ್ನ ಮಗನ 2ನೇ ಸಿನಿಮಾ ಬರುತ್ತಿದೆ. ನಿರ್ದೇಶಕ ಸಾಯಿಶಿವನ್ ಒಳ್ಳೆಯ ಸಿನಿಮಾ ಮಾಡಿದ್ದಾರೆ. ಚಿತ್ರದ ಹಾಡುಗಳನ್ನು ಕೇಳಿದ್ದೇನೆ. ಈ ಸಿನಿಮಾ ಶತದಿನೋತ್ಸವ ಆಚರಿಸಲಿ ಎಂದು ಶುಭ ಹಾರೈಸಿದರು.

ಪ್ರಣಾಮ್ ದೇವರಾಜ್ ಮಾತನಾಡಿ, ಹಿಂದಿನ ಚಿತ್ರದಲ್ಲಿ ಚಾಕೊಲೇಟ್ ಬಾಯ್ ಆಗಿದ್ದೆ. ಈ ಸಿನಿಮಾದಲ್ಲಿ ಆಕ್ಷನ್ ಹೀರೋ ಆಗಿದ್ದೇನೆ. ಸಾಯಿ ಶಿವನ್ ಅವರಲ್ಲಿ ತುಂಬಾ ಕಾನ್ಫಿಡೆನ್ಸ್ ಇದೆ. ನಿರ್ಮಾಪಕರಾಗಿ ಮಲ್ಲಿಕಾರ್ಜುನ ಹಾಗೂ ವೇಮಾರೆಡ್ಡಿ ಅವರು ತುಂಬಾ ಸಪೋರ್ಟ್ ಮಾಡಿದ್ದಾರೆ. ಡಿ.ಓ.ಪಿ. ಕೆಲಸವೂ ಅದ್ಭುತವಾಗಿದೆ. ನಾನು ಇಷ್ಟು ಚೆನ್ನಾಗಿ ತೆರೆಮೇಲೆ ಕಾಣಿಸಲು ಅವರೇ ಕಾರಣ ಎಂದರು.

ನಾಯಕಿ ಮೋನಾಲ್ ಮಾತನಾಡಿ, ಇದು ನನ್ನ ಮೊದಲ ಕನ್ನಡ ಚಿತ್ರ. ಒಬ್ಬ ಕ್ರಿಶ್ಚಿಯನ್ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಒಳ್ಳೆಯ ಲವ್ ಸ್ಟೋರಿ ಚಿತ್ರದಲ್ಲಿದೆ ಎಂದರು.

ಚಿತ್ರದಲ್ಲಿ ಜನರಿಗೆ ಒಂದು ಯೂನಿವರ್ಸಲ್ ಮೆಸೇಜ್ ಇದೆ. ಜನ ಬದಲಾಗಬೇಕು ಎಂದು ಹೇಳಲಾಗಿದೆ. ಜನ ಸಪೋರ್ಟ್ ಮಾಡುತ್ತಾರೆಂಬ ನಂಬಿಕೆಯಿದೆ ಎಂದು ಖಳನಾಯಕ ಗರುಡಾರಾಮ್ ಹೇಳಿದರು.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!