ಜ.28ಕ್ಕೆ ‘ವರದ’ ತೆರೆಗೆ

ವಿನೋದ್ ಪ್ರಭಾಕರ್ ನಟನೆಯ ‘ವರದ’ ಚಿತ್ರ ಜ. 28ರಂದು ಬಿಡುಗಡೆ ಆಗುವ ಸಾಧ್ಯತೆ ಇದೆ.

ದರ್ಶನ್ ನಟನೆಯ ‘ರಾಬರ್ಟ್‌’ ಸಿನಿಮಾದಲ್ಲಿ ಕಾಣಿಸಿಕೊಂಡ ಬಳಿಕ ಸಣ್ಣ ಬ್ರೇಕ್‌ ತೆಗೆದುಕೊಂಡ ವಿನೋದ್‌ ಪ್ರಭಾಕರ್ ಈಗ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ.

ಈ ಚಿತ್ರವನ್ನು ಉದಯ ಪ್ರಕಾಶ್ ನಿರ್ಮಾಣ ಹಾಗೂ ನಿರ್ದೇಶನ ಮಾಡಿದ್ದಾರೆ. ಸುನೀತಾ ಪ್ರಕಾಶ್‌ ಸಹ ನಿರ್ಮಾಪಕರು ಆಗಿದ್ದಾರೆ. ಚಿತ್ರಕ್ಕೆ ವಿನಾಯಕರಾಮ್ ಅವರ ಸಂಭಾಷಣೆಯಿದೆ. ಕೆ.ಕಲ್ಯಾಣ್ ಹಾಗೂ ಚೇತನ್ ಕುಮಾರ್ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ.

ಅಮಿತಾ ಈ ಚಿತ್ರದ ನಾಯಕಿ ಆಗಿದ್ದಾರೆ. ವಿನೋದ್ ಪ್ರಭಾಕರ್ ಅವರ ತಂದೆಯ ಪಾತ್ರದಲ್ಲಿ ಹಿರಿಯ ನಟ ಚರಣ್ ರಾಜ್ ಅವರು ನಟಿಸಿದ್ದಾರೆ.ಅನಿಲ್ ಸಿದ್ದು, ಎಂ.ಕೆ.ಮಠ, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ, ರಾಧಾ ರಂಗನಾಥ್, ರಾಜೇಶ್ವರಿ, ದುರ್ಗ, ಮಾನಸ, ಅರವಿಂದ್, ರೋಬೊ ಗಣೇಶ್, ಲೋಕೇಶ್, ನಮನ, ರಾಮಸ್ವಾಮಿ ಚಿತ್ರದಲ್ಲಿ ನಟಿಸಿದ್ದಾರೆ.

ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯು. ಡಿ.ವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್, ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಚಿತ್ರತಂಡ ಜ.28ಕ್ಕೆ ಚಿತ್ರ ರಿಲೀಸ್ ಮಾಡಲು ಯೋಜನೆ ಹಾಕಿಕೊಂಡಿದೆ. ಆದರೆ ಓಮಿಕ್ರಾನ್ ಕಾರಣದಿಂದ ಚಿತ್ರಬಿಡುಗಡೆ ಅಂದುಕೊಂಡಂತೆ ಆಗುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬದಂದು ವಿಶೇಷ ಟೀಸರ್ ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!